Connect with us

Dvg Suddi-Kannada News

ಏಪ್ರಿಲ್  12 ರಿಂದ ಬೇಸಿಗೆ ರಜೆ ಘೋಷಣೆ

ಪ್ರಮುಖ ಸುದ್ದಿ

ಏಪ್ರಿಲ್  12 ರಿಂದ ಬೇಸಿಗೆ ರಜೆ ಘೋಷಣೆ

ಡಿವಿಜಿ ಸುದ್ದಿ, ಬೆಂಗಳೂರು: ಕೊರೊನಾ ಭೀತಿಯಿಂದ ಶಾಲೆಗಳಿಗೆ  ಏಪ್ರಿಲ್ 11 ವರೆಗೆ ಘೋಷಣೆ ಮಾಡಿದ್ದ ರಜೆಯನ್ನು ಮದುವರಿಸಿದ ರಾಜ್ಯ ಸರ್ಕಾರ ಏಪ್ರಿಲ್ 12 ರಿಂದ  ಶಾಲೆಗಳಿಗೆ ಬೇಸಿಗೆ ರಜೆ ಘೋಷಣೆ ಮಾಡಿದೆ.

ಕೊರೊನಾ ವೈರಸ್ ದೇಶದಲ್ಲಿ ಹೆಚ್ಚಾಗುತ್ತಿರುವ ಹಿನ್ನೆಲೆ ಏಪ್ರಿಲ್ 11ರ ವರೆಗೆ ಸರ್ಕಾ‌ರ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿತ್ತು. ಈಗ ಕೊರೊನಾ ವೈರಸ್ ಹರಡುವಿಕೆ ಮತ್ತೆ ಹೆಚ್ಚಳವಾದ ಕಾರಣ ಏಪ್ರಿಲ್ 12ರಿಂದ ರಾಜ್ಯದ ಎಲ್ಲಾ ಶಾಲೆಗಳಿಗೆ ಬೇಸಿಗೆ ರಜೆಯನ್ನು ರಾಜ್ಯ ಸರ್ಕಾರ ಘೋಷಣೆ ಮಾಡಿದೆ.

ಈ ಬಗ್ಗೆ ರಾಜ್ಯ ಸರ್ಕಾರ ಸುತ್ತೋಲೆ‌ ಹೊರಡಿಸಿದ್ದು, ಶಿಕ್ಷಕರಿಗೆ ಕೆಲ ನಿಯಮಗಳನ್ನು ಸೂಚಿಸಿದೆ. ಶಿಕ್ಷಕರು ಕೇಂದ್ರ ಸ್ಥಾನ ಬಿಡುವಂತಿಲ್ಲ ಹಾಗೂ ಅವರ ತಮ್ಮ ಮೊಬೈಲ್ ನಂಬರ್
ಬಿಇಓಗಳಿಗೆ ನೀಡಬೇಕು. ಅಗತ್ಯ ತುರ್ತು ಸೇವೆ ಇದ್ದರೆ ಕರೆ ಮಾಡಿದಾಗ ಬಂದು ಕಡ್ಡಾಯವಾಗಿ ಕರ್ತವ್ಯಕ್ಕೆ ಹಾಜರಾಗಬೇಕು ಎಂದು ಸರ್ಕಾರ ಆದೇಶದಲ್ಲಿ ಉಲ್ಲೇಖಿಸಿದೆ.

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

Advertisement Enter ad code here
Advertisement

ದಾವಣಗೆರೆ

Advertisement

ಪ್ರಮುಖ ಸುದ್ದಿ

News

Advertisement
Advertisement e

namma davanagere

ಸಿದ್ದನೂರು ಮತ್ತು ಅಗಸನಕಟ್ಟೆಯ ನಿಕ್ರಾ ಯೋಜನೆಯ ದೃಶ್ಯಾವಳಿ

Advertisement
To Top