ಡಿವಿಜಿ ಸುದ್ದಿ, ಹರಪನಹಳ್ಳಿ: ತಾಲ್ಲೂಕಿನ ಉಚ್ಚoಗಿದುರ್ಗ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೇವಿನಹಳ್ಳಿ ಕೆರೆಗೆ ಜಿಲ್ಲಾ ಪಂಚಾಯತ್ ಸದಸ್ಯೆ ರಶ್ಮಿ ರಾಜಪ್ಪ, ತಾಲ್ಲೂಕು ಪಂಚಾಯಿತಿ ಸದಸ್ಯ ಕೆಂಚನಗೌಡ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಅಶ್ವಿನಿ ಚಂದ್ರಪ್ಪ ಹಾಗೂ ಸರ್ವ ಸದಸ್ಯರ ಸಮ್ಮುಖದಲ್ಲಿ ಕೆರೆಗೆ ಪೂಜೆ ಸಲ್ಲಿಸಿ ಬಾಗಿನ ಅರ್ಪಿಸಿದರು.
ನಂತರ ಮಾತನಾಡಿದ ಜಿಲ್ಲಾ ಪಂಚಾಯತಿ ಸದಸ್ಯ ರಶ್ಮಿರಾಜಪ್ಪ, ನಮ್ಮ ಭಾಗದಲ್ಲಿ ಉತ್ತಮ ಮಳೆಯಾಗಿದ್ದು, ಕೆರೆ ತುಂಬಿ ಹರಿಯುತ್ತಿದೆ. ದೇವರೂ ಪ್ರತಿ ವರ್ಷ ಉತ್ತಮ ಮಳೆ ಬೆಳೆ ಕೊಟ್ಟು ಕಾಪಾಡಲಿ ಎಂದರು.

ಗ್ರಾಮ ಪಂಚಾಯಿತಿ ಅಧ್ಯಕ್ಷ ಅಶ್ವಿನಿ ಚಂದ್ರಪ್ಪ ಮಾತನಾಡಿ ನಮ್ಮ ಉಚ್ಚoಗಿದುರ್ಗ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕೆರೆ ತುಂಬಿರುವುದು ಸಂತೋಷದ ಸಂಗತಿ ಇದರಿಂದ ದನಕರುಗಳು, ಗ್ರಾಮಸ್ಥರಿಗೆ ಕುಡಿಯುವ ನೀರಿನ ಅಭಾವ ಕಡಿಮೆಯಾಗುತ್ತದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಸರ್ವ ಸದಸ್ಯರು,ತಾಲ್ಲೂಕ ಪಂಚಾಯತ್ ಸದಸ್ಯರು,ಜಿಲ್ಲಾ ಪಂಚಾಯತ್ ಸದಸ್ಯರು, ಗ್ರಾಮಸ್ಥರು ಉಪಸ್ಥಿತರಿದ್ದರು.



