ಡಿವಿಜಿ ಸುದ್ದಿ, ಹರಪನಹಳ್ಳಿ: ತಾಲ್ಲೂಕಿನ ಎಲ್ಲಾ ಧಾರ್ಮಿಕ ಕ್ಷೇತ್ರಗಳಲ್ಲಿ ಸ್ವಚ್ಛತೆ ನಿರ್ವಹಣೆಗಾಗಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಉಚಿತವಾಗಿ ಕಸದ ಡಬ್ಬಿಗಳನ್ನು ವಿತರಣೆ ಮಾಡಲಾಗುತ್ತಿದೆ ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ತಾಲೂಕು ಯೋಜನಾ ಅಧಿಕಾರಿಯಾದ ಗಣೇಶ್ ಮರಾಠಿ ಹೇಳಿದರು.
ಹಾಲಮ್ಮನ ದೇವಸ್ಥಾನದ ಆವರಣದಲ್ಲಿ ಮಂಗಳವಾರ ಕಸ ಸಂಗ್ರಹಿಸುವ ಡಬ್ಬಿಗಳನ್ನು ಶ್ರೀ ಹಾಲಮ್ಮ ವ್ಯವಸ್ಥಾಪಕ ಸಮಿತಿಗೆ ಹಸ್ತಾಂತರಿಸಲಾಯಿತು. ಡಬ್ಬಿಗಳನ್ನು ಸ್ವೀಕರಿಸಿ ಮಾತನಾಡಿದ ಸಮಿತಿ ಸದಸ್ಯರಾದ ಕೆಂಚಪ್ಪ
ದೇವಾಲಯಗಳು ಹಾಗೂ ಎಲ್ಲಾ ಧರ್ಮಗಳ ಧಾರ್ಮಿಕ ಕ್ಷೇತ್ರಗಳಲ್ಲಿ ಸ್ವಚ್ಛತೆಯನ್ನು ಕಾಪಾಡುವ ನಿಟ್ಟಿನಲ್ಲಿ ಧರ್ಮಸ್ಥಳ ಯೋಜನೆ ರಾಜ್ಯದ ತುಂಬಾ ಕಸದ ಡಬ್ಬಿಗಳ ವಿತರಿಸುವ ಅಭಿಯಾನವನ್ನು ಹಮ್ಮಿಕೊಂಡಿರುವುದು ಹೆಮ್ಮೆಯ ವಿಷಯವಾಗಿದೆ. ಧರ್ಮಸ್ಥಳ ಯೋಜನೆಯಿಂದ ಸಾಕಷ್ಟು ಯೋಜನೆಗಳನ್ನು ತಂದಿದ್ದಾರೆ, ಪ್ರತಿ ಧಾರ್ಮಿಕ ತಾಣಕ್ಕೆ ಹಸಿ ಮತ್ತು ಒಣ ಕಸ ಸಂಗ್ರಹಿಸಲು ತಲಾ ಎರಡು ಡಬ್ಬಿಗಳನ್ನು ವಿತರಣೆ ಮಾಡಿದ್ದಾರೆ.
ಇವುಗಳ ಸದುಪಯೋಗ ಪಡೆದುಕೊಂಡು ಸ್ವಚ್ಛತೆಗೆ ಆದ್ಯತೆ ನೀಡಬೇಕೆಂದು ಕರೆ ನೀಡಿದ್ದಾರೆ 3 ವರ್ಷದ ಹಿಂದೆ ಧರ್ಮಸ್ಥಳ ಸಂಸ್ಥೆಯಿಂದ ಉಚ್ಚoಗೆಮ್ಮನ ದೇವಸ್ಥಾನ ಸ್ವಚ್ಛಗೊಳಿಸಿ ಸ್ವಚ್ಛತೆ ಬಗ್ಗೆ ಭಕ್ತರಲ್ಲಿ ಜಾಗೃತಿ ಮೂಡಿಸಿದ್ದರು.
ಇದೇ ಸಂಧರ್ಭದಲ್ಲಿ ಸಮಿತಿ ಸದಸ್ಯರಾದ ಮುರುಗೇಶ್,ಸಿದ್ದಪ್ಪ,ಅರ್ಚಕರಾದ ಕೇಂಚ್ಚಪ್ಪ, ರಮೇಶ್, ತಾಲ್ಲೂಕಿನ ಯೋಜನಾ ಅಧಿಕಾರಿಗಳಾದ ಗಣೇಶ್ ಮರಾಠಿ, ಮೇಲ್ವಿಚಾರಕರಾದ ಮಂಜುನಾಥ್ ಉಪಸ್ಥಿತರಿದ್ದರು.