ಡಿವಿಜಿ ಸುದ್ದಿ, ಹರಪನಹಳ್ಳಿ : ತಾಲೂಕಿನ ಉಚ್ಚಂಗಿದುರ್ಗದಲ್ಲಿ ಉಚ್ಚಂಗಮ್ಮನ ಜಾತ್ರೆಗೆ ಕೋಲಾರದಿಂದ ಬಂದ ಸುಮಾರು 30ಕ್ಕಿಂತ ಹೆಚ್ಚು ಜನರು ಊಟ ವಸತಿ ಇಲ್ಲದೆ ಪರದಾಟ ನಡೆಸುತ್ತಿದ್ದಾರೆ ಎಂಬ ಸುದ್ದಿ ತಿಳಿದ ತಕ್ಷಣ ಬೆಳಗ್ಗೆ ಸ್ಥಳಕ್ಕೆ ಆಗಮಿಸಿದ ಬಳ್ಳಾರಿ ಸಂಸದ ದೇವೇಂದ್ರಪ್ಪ ಭೇಟಿ ನೀಡಿ ಸಾಂತ್ವನ ಹೇಳಿದರು. ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗೆ ಸೂಕ್ತ ವ್ಯವಸ್ಥೆ ಮಾಡವಂತೆ ಸೂಚಿಸಿದರು.
ಗ್ರಾಮ ಪಂಚಾಯಿತಿ ಅಧ್ಯಕ್ಷರು, ಸರ್ವ ಸದಸ್ಯರು, ಹರಪನಹಳ್ಳಿ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಭೀಮಾ ನಾಯಕ್ ,ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹಾಗೂ ಉಚ್ಚoಗಿದುರ್ಗ ಗ್ರಾಮಸ್ಥರ ನೇತೃತ್ವದಲ್ಲಿ ಬಡ ವ್ಯಾಪಾರಿಗಳಿಗೆ ದಿನ ಬಳಕೆ ವಸ್ತುಗಳನ್ನು ನೀಡಿದರು.
ವಿಶೇಷವಾಗಿ ಗ್ರಾಮ ಪಂಚಾಯಿತಿ ಸದಸ್ಯರಾದ ಕುಮಾರ್ ಉಚ್ಚಂಗಿದುರ್ಗದಲ್ಲಿ ಬೀಡುಬಿಟ್ಟಿದ್ದ ಜನರಿಗೆ ಅಕ್ಕಿ ನೀಡಿ ಮಾನವೀಯತೆ ಮೆರೆದರು.