ಡಿವಿಜಿ ಸುದ್ದಿ, ಹರಪನಹಳ್ಳಿ: ಕೊರೊನಾ ಲಾಕ್ ಡೌನ್ ಗಿಂತ ಮುನ್ನ ಮೆಕ್ಕೆಜೋಳ ಖರೀದಿ ಕೇಂದ್ರ ತೆರೆಯುವಂತೆ ಸಿಎಂ .ಬಿ.ಎಸ್. ಯಡಿಯೂರಪ್ಪ ಅವರಿಗೆ ಮನವಿ ಮಾಡಲಾಗಿತ್ತು. ಇದೀಗ ಇನ್ನೊಮ್ಮೆ ಮನವಿ ಮಾಡಲಾಗುವುದು ಎಂದು ಶಾಸಕ ಜಿ. ಕರುಣಾಕರ ರೆಡ್ಡಿ ಹೇಳಿದರು.

ತಾಲ್ಲೂಕಿನ ಬೆಣ್ಣೆ ಹಳ್ಳಿಯಲ್ಲಿ, ಹಗರಿ ಗಜಾಪುರ ಗ್ರಾಮಗಳಲ್ಲಿ 7.70 ಕೋಟಿ ವೆಚ್ಚ ಕಾಮಗಾರಿಗೆ ಚಾಲನೆ ನೀಡಿದ ಬಳಿಕ ಮಾತನಾಡಿದರು. ಲಾಕ್ ಡೌನ್ ನಿಂದ ರೈತರು ತೀವ್ರ ಸಂಕಷ್ಟದಲ್ಲಿದ್ದಾರೆ. ಹೀಗಾಗಿ ಮೆಕ್ಕೆಜೋಳ ಕೇಂದ್ರವನ್ನು ತೆರೆಯಬೇಕು ಎಂದು ಮನವಿ ಮಾಡುತ್ತೇನೆ ಎಂದರು.
ಈ ಸಂದರ್ಭದಲ್ಲಿ ಸಂಸದ ಜಿ.ಎಂ. ಸಿದ್ದೇಶ್ವರ , ತಾಲ್ಲೂಕು ಪಂಚಾಯ್ತಿ ಅಧ್ಯಕ್ಷೆ ಅನ್ನಪೂರ್ಣಮ್ಮ, ಉಪಾಧ್ಯಕ್ಷ ಮಂಜನಾಯ್ಕ್ , ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಚೆನ್ನಮ್ಮ , ಬಿಜೆಪಿ ತಾಲ್ಲೂಕು ಅಧ್ಯಕ್ಷ ಸುತ್ತೂರು ಹಾಲೇಶ್ ಉಪದ್ಥಿತರಿದ್ದರು.



