ಡಿವಿಜಿ ಸುದ್ದಿ, ಹಾಸನ: ಲಾಕ್ ಡೌನ್ ಹಿನ್ನೆಲೆ ಮುಖ್ಯಮಂತ್ರಿ ಪರಿಹಾರ ನಿಧಿಗೆ ಶ್ರವಣಬೆಳಗೊಳದ ಜೈನ ಮಠದ ಸ್ವಸ್ತಿ ಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀ ಅವರು 10 ಲಕ್ಷ ರೂಪಾಯಿ ದೇಣಿಗೆ ನೀಡಿದ್ದಾರೆ.
ಕೊರೊನಾ ಸೋಂಕಿನಿಂದಾಗಿ ಲಕ್ಷಾಂತರ ಜನರು ಅಪಾಯಕ್ಕೆ ಸಿಲುಕಿದ್ದಾರೆ. ಇಂತಹ ಸಂಕಷ್ಟ ಪರಿಸ್ಥಿತಿಯಲ್ಲಿ ಪ್ರತಿಯೊಬ್ಬರೂ ಮಾನವೀಯ ನೆಲೆಯಲ್ಲಿ ಸ್ಪಂದಿಸುವುದು ಅಗತ್ಯವಾಗಿದೆ ಎಂದು ಶ್ರೀಗಳು ತಿಳಿಸಿದ್ದಾರೆ.

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭಾರತದಲ್ಲಿ ಸೋಂಕಿನಿಂದ ಉಂಟಾಗಬಹುದಾದ ಹಾನಿಯನ್ನು ತಡೆಯಲು ಮತ್ತು ಆರೋಗ್ಯದ ದೃಷ್ಟಿಯಿಂದ ದೇಶದಾದ್ಯಂತ ಮುಂಜಾಗ್ರತಾ ಕ್ರಮವಾಗಿ ಲಾಕ್‍ಡೌನ್ ಘೋಷಣೆ ಮಾಡಿದ್ದರು. ಪ್ರಧಾನಿ ಅವರ ಈ ನಿರ್ಧಾರ ಅತ್ಯಂತ ಮಹತ್ತರ ನಿರ್ಧಾರವಾಗಿದೆ. ಇದೊಂದು ಉಪಯುಕ್ತ ಹಾಗೂ ಶ್ಲಾಘನೀಯ ಕಾರ್ಯ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುದ್ದಿಗಾಗಿ ವಾಟ್ಸಾಪ್ : 7483892205
ಇಮೇಲ್: dvgsuddi@gmail.com



