ಡಿವಿಜಿ ಸುದ್ದಿ ರಾಣೇಬೆನ್ನೂರು: ಹಾವೇರಿ ಜಿಲ್ಲೆಯ ರಾಬೇನ್ನೂರು ತಾಲ್ಲೂಕಿನ ದೇವರಗುಡ್ಡದ ಐತಿಹಾಸಿಕ ಮಾಲತೇಶ ದೇವಸ್ಥಾನದಲ್ಲಿ ಅನಿರ್ಧಿಷ್ಟಾವಧಿಗೆ ಬಂದ್ ಆಗಲಿದೆ.
ಕೊರೊನಾ ವೈರಸ್ ಹಿ್ನ್ನೆಲೆ ರಾಜ್ಯ ಸರ್ಕಾರದ ಆದೇಶ ಹಾಗೂ ಕೆಲವು ಸೂಚನೆಗಳನ್ನ ಪಾಲನೆ ಮಾಡುತ್ತಾ ರಾಜ್ಯದ ಬಹುತೇಕ ದೇವಾಲಯ ಓಪನ್ ಆಗಿ ಭಕ್ತರಿಗೆ ದೇವರ ದರ್ಶನ ನೀಡಲಾಗುತ್ತಿದೆ.
ರಾಣೇಬೆನ್ನೂರು ತಾಲೂಕಿನ ದೇವರಗುಡ್ಡದ ಐತಿಹಾಸಿಕ ಮಾಲತೇಶ ದೇವಸ್ಥಾನದಲ್ಲಿ ಅನಿರ್ಧಿಷ್ಟಾವಧಿವರೆಗೆದರ್ಶನ ಇಲ್ಲ ಎಂದು ಗ್ರಾಮಸ್ಥರು ಹಾಗೂ ದೇವಸ್ಥಾನ ಪ್ರಧಾನ ಅರ್ಚಕರು ನಿರ್ಧಾರ ಮಾಡಿದ್ದಾರೆ. ದೇವಸ್ಥಾನ ಸಮಿತಿ ಹಾಗೂ ಗ್ರಾಮಸ್ಥರು ಸಭೆ ಸೇರಿ ಈ ನಿರ್ಧಾರ ಕೈಕೊಂಡಿದ್ದಾರೆ.
ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆ ಈ ನಿರ್ಧಾರ ಮಾಡಿದ್ದಾರೆ. ಪ್ರಸಿದ್ಧ ಮಾಲತೇಶ ದೇವಸ್ಥಾನಕ್ಕೆ ರಾಜ್ಯ ಹಾಗೂ ಹೊರ ರಾಜ್ಯಗಳಿಂದ ಭಕ್ತರು ದೇವರ ದರ್ಶನಕ್ಕೆ ಬರುತ್ತಾರೆ. ಅರ್ಚಕರು ಹಾಗೂ ಗ್ರಾಮಸ್ಥರ ಹಿತದೃಷ್ಟಿಯಿಂದ ದೇವರ ದರ್ಶನ ಬಂದ್ ಮಾಡಲಾಗಿದೆ



