Connect with us

Dvgsuddi Kannada | online news portal | Kannada news online

ನರ್ಸ್ ,ಆಶಾ ಕಾರ್ಯಕರ್ತೆಯರ ಮೇಲಿನ ಹಲ್ಲೆಗೆ ನಿರ್ದಾಕ್ಷಿಣ್ಯ ಕ್ರಮ: ಆರೋಗ್ಯ ಸಚಿವ ಶ್ರೀರಾಮುಲು

ಪ್ರಮುಖ ಸುದ್ದಿ

ನರ್ಸ್ ,ಆಶಾ ಕಾರ್ಯಕರ್ತೆಯರ ಮೇಲಿನ ಹಲ್ಲೆಗೆ ನಿರ್ದಾಕ್ಷಿಣ್ಯ ಕ್ರಮ: ಆರೋಗ್ಯ ಸಚಿವ ಶ್ರೀರಾಮುಲು

ಡಿವಿಜಿ ಸುದ್ದಿ, ಬೆಂಗಳೂರು: ನರ್ಸ್, ಆಶಾ ಕಾರ್ಯಕರ್ತೆಯರ ಮೇಲೆ ನಗರದ ಸಾಧಿಕ್‌ ಪಾಳ್ಯದಲ್ಲಿ ಹಲ್ಲೆಗೆ ಯತ್ನಿಸಿರುವ ಘಟನೆಗೆ ಆರೋಗ್ಯ ಸಚಿವ ಬಿ. ಶ್ರೀರಾಮುಲು ಆಕ್ರೋಶ ವ್ಯಕ್ತಪಡಿಸಿದ್ದು, ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಇಂತಹ ಕಷ್ಟದ ಸಮಯದಲ್ಲಿಯೂ ಅವರು ಹಗಲಿರುಳು ನಮಗಾಗಿ ದುಡಿಯುತ್ತಿದ್ದಾರೆ. ಅವರ ಮೇಲೆ ಹಲ್ಲೆ ನಡೆದರೆ ನೋಡಿಕೊಂಡು ಸುಮ್ಮನೆ ಕೂರಲಾಗುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.

ಈ ಬಗ್ಗೆ ಟ್ವೀಟ್‌ ಮಾಡಿರುವ ಅವರು, ಇಲ್ಲಿ ಜಾತಿ, ಮತ, ಧರ್ಮ, ನಿಮ್ಮ ವೈಯಕ್ತಿಕ ಹಿತಾಸಕ್ತಿ ಮುಖ್ಯವಲ್ಲ. ಕೋಟ್ಯಂತರ ಕನ್ನಡಿಗರು, ಭಾರತೀಯರ ಆರೋಗ್ಯ ಮುಖ್ಯವಾಗಿದೆ. ಬೆಂಗಳೂರಿನ ಸಾಧಿಕ್ ಪಾಳ್ಯದಲ್ಲಿ ಕೆಲವು ಕಿಡಿಗೇಡಿಗಳು ಸೇರಿ ನರ್ಸ್ ಮೇಲೆ ಹಲ್ಲೆ ಮಾಡಿರುವುದು ಅತ್ಯಂತ ಹೇಯ ಕೃತ್ಯ. ಅವರು ಯಾರೇ ಆಗಲಿ, ಅವರ ಮೇಲೆ ನಿರ್ದಾಕ್ಷಿಣ್ಯವಾಗಿ  ಕ್ರಮ ಕೈಗೊಳ್ಳಲಿದ್ದೇವೆ ಎಂದು ತಿಳಿಸಿದ್ದಾರೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top