ಡಿವಿಜಿ ಸುದ್ದಿ, ಬೆಳಗಾವಿ: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಪ್ರವಾಹ ಪೀಡಿತ ಉತ್ತರ ಕರ್ನಾಟಕ ಭಾಗದಲ್ಲಿ ಇಂದು ವೈಮಾನಿಕ ಸಮೀಕ್ಷೆ ನಡೆಸಲಿದ್ದಾರೆ. ಇದಕ್ಕೂ ಮುನ್ನ ಬೆಳಗಾವಿ, ಧಾರವಾಡ ಜಿಲ್ಲೆಗಳ ಸಚಿವರು, ಸಂಸದರು ಹಾಗೂ ಜಿಲ್ಲಾಧಿಕಾರಿಳೊಂದಿಗೆ ಮಳೆ ಹಾನಿ ಕುರಿತಂತೆ ಚರ್ಚೆ ನಡೆಸಿದರು.
ಈ ಸಂದರ್ಭದಲ್ಲಿ ಉಪ ಮುಖ್ಯಮಂತ್ರಿ ಗಳಾದ ಲಕ್ಷ್ಮಣ್ ಸವದಿ, ಕಂದಾಯ ಸಚಿವ ಆರ್. ಅಶೋಕ್, ಗೃಹ ಸಚಿವ ಬಸವರಾಜ್ ಬೊಮ್ಮಾಯಿ, ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಸೇರಿದಂತೆ ಬೆಳಗಾವಿ ಮತ್ತು ಧಾರವಾಡ ಜಿಲ್ಲೆಯ ಜನಪ್ರತಿನಿಧಿಗಳು ಉಪಸ್ಥಿತರಿದ್ದರು.

ಸಿಎಂ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಬರುತ್ತಿದ್ದಂತೆ ರೈತರಿಂದ ಪ್ರತಿಭಟನೆಯ ಬಿಸಿ ತಟ್ಟಿತ್ತು. ಭೂ ಸುಧಾರಣೆ ಕಾಯ್ದೆ ಹಾಗೂ ಎಂಪಿಎಂ ತಿದ್ದುಪಡೆ ಕಾಯ್ದೆ ಹಾಗೂ ನೆರೆ ಪರಿಹಾರಕ್ಕೆ ಸಂಬಂಧಿಸಿದಂತೆ ರೈತರು ಪ್ರತಿಭಟನೆ ನಡೆಸಿದರು.
ಸೇನಾ ಹೆಲಿಕಾಪ್ಟರ್ ಮೂಲಕ ವೈಮಾನಿಕ ಸಮೀಕ್ಷೆ ಕೈಗೊಳ್ಳಲಿದ್ದಾರೆ. ಬೆಳಗಾವಿ, ವಿಜಯಪುರ, ಬಾಗಲಕೋಟೆ ಜಿಲ್ಲೆಗಳಲ್ಲಿ ಸಮೀಕ್ಷೆ ನಡೆಸಲಿದ್ದಾರೆ.ನಂತರ ಆಲಮಟ್ಟಿ ಜಲಾಶಯಕ್ಕೆ ಭೇಟಿ ನೀಡಲಿದ್ದಾರೆ. ಮಧ್ಯಾಹ್ನ 1 ಗಂಟೆಗೆ ವಿಜಯಪುರ, ಬಾಗಲಕೋಟೆ, ಗದಗ ಜಿಲ್ಲೆಗಳಿಗೆ ಸಂಬಂಧಿಸಿದಂತೆ ಸಚಿವರು, ಶಾಸಕರು, ಜಿಲ್ಲಾಧಿಕಾರಿಗಳ ಜೊತೆ ಮಳೆ ಹಾನಿ ಸಂಬಂಧಿಸಿದಂತೆ ಸಭೆ ನಡೆಸಲಿದ್ದಾರೆ.
ಮಧ್ಯಾಹ್ನ 2.30ಕ್ಕೆ ವೈಮಾನಿಕ ಸಮೀಕ್ಷೆ ಕೈಗೊಳ್ಳಲಿದ್ದು, ಸಂಜೆ 5 ಗಂಟೆಗೆ ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣದಿಂದ ಬೆಂಗಳೂರಿಗೆ ವಾಪಸ್ಸಾಗಲಿದ್ದಾರೆ. ಕಂದಾಯ ಸಚಿವ ಆರ್.ಅಶೋಕ್ ಸಿಎಂಗೆ ಸಾತ್ ಕೊಡಲಿದ್ದಾರೆ.



