Connect with us

Dvgsuddi Kannada | online news portal | Kannada news online

ಜು.16 ವರೆಗೆ ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ..!

ಪ್ರಮುಖ ಸುದ್ದಿ

ಜು.16 ವರೆಗೆ ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ..!

ಡಿವಿಜಿ ಸುದ್ದಿ, ಬೆಂಗಳೂರು: ರಾಜ್ಯದ ದಕ್ಷಿಣ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಜು.12ರಿಂದ 16ರವರೆಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ  ಮಾಹಿತಿ ನೀಡಿದೆ.

ಅದರಲ್ಲೂ ತುಮಕೂರು, ಶಿವಮೊಗ್ಗ, ರಾಮನಗರ, ಕೋಲಾರ, ಕೊಡಗು, ಹಾಸನ, ಚಿಕ್ಕಮಗಳೂರು, ಚಾಮರಾಜನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಭಾನುವಾರದಂದು ಗುಡುಗು, ಸಿಡಿಲು ಸಹಿತ ಮಳೆಯಾಗುವ ನಿರೀಕ್ಷೆಯಿದ್ದು, ಎಲ್ಲ ಜಿಲ್ಲೆಗಳಲ್ಲಿ ಯೆಲ್ಲೊ ಅಲರ್ಟ್ ಘೋಷಿಸಲಾಗಿದೆ.

ಉತ್ತರ ಒಳನಾಡಿನಲ್ಲಿ ಮಳೆ ತಗ್ಗಿದೆ. ಸೋಮವಾರದಿಂದ ಕರಾವಳಿ ಭಾಗದಲ್ಲಿ ಮಳೆ ಹೆಚ್ಚಾಗಲಿದೆ. ಕರಾವಳಿಯಲ್ಲಿ ವೇಗವಾದ ಗಾಳಿ ಬೀಸುತ್ತಿರುವುದರಿಂದ ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿದೆ.

ಉತ್ತರ ಕನ್ನಡ ಜಿಲ್ಲೆಯ ಅಂಕೋಲಾದಲ್ಲಿ ಗರಿಷ್ಠ 11 ಸೆಂ.ಮೀ ಮಳೆಯಾಗಿದೆ. ಕಾರವಾರ 10, ಭಟ್ಕಳ, ಕುಂದಾಪುರ 4, ಕಮಲಾಪುರ 3, ಬೀದರ್, ಚಿಂಚೋಳಿ, ಸಿಂಧನೂರು 2, ಬೈಲಹೊಂಗಲ, ನರಗುಂದ, ಕಲಬುರ್ಗಿ, ಕೋಲಾರ, ಹೊಸಕೋಟೆ, ಗೌರಿಬಿದನೂರು, ಮಧುಗಿರಿಯಲ್ಲಿ ತಲಾ 1 ಸೆಂ.ಮೀ ಮಳೆಯಾಗಿದೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

ದಾವಣಗೆರೆ

Advertisement
Advertisement Enter ad code here

Title

To Top