Connect with us

Dvg Suddi-Kannada News

ದೇಶ ವಿರೋಧಿಗಳನ್ನು ಬೇರು ಸಹಿತ ಕಿತ್ತು ಹಾಕಲಾಗುವುದು: ಗೃಹ ಸಚಿವ ಬಸವರಾಜ್ ಬೊಮ್ಮಾಯಿ

ಪ್ರಮುಖ ಸುದ್ದಿ

ದೇಶ ವಿರೋಧಿಗಳನ್ನು ಬೇರು ಸಹಿತ ಕಿತ್ತು ಹಾಕಲಾಗುವುದು: ಗೃಹ ಸಚಿವ ಬಸವರಾಜ್ ಬೊಮ್ಮಾಯಿ

  ಡಿವಿಜಿ ಸುದ್ದಿ, ದಾವಣಗೆರೆ: ದೇಶ ವಿರೋಧ ಹೇಳಿಕೆ ನೀಡುತ್ತಿರುವವರ ಹಿಂದೆ ಬಗಳ ದೊಡ್ಡ ಷಡ್ಯಂತ್ರ ನಡೆಯುತ್ತಿದೆ. ಇಂತಹ ಕೃತ್ಯದಲ್ಲಿ ಭಾಗಿಯಾದವರನ್ನ ಬೇರು ಸಹಿತ ಕಿತ್ತಾಕಲಾಗುವುದು ಗರಹಸಚಿವ ಬಸವರಾಜ್ ಬೊಮ್ಮಾಯಿ ಹೇಳಿದರು.
ದಾವಣಗೆರೆಯಲ್ಲಿ ಸುದ್ದಿಗಾರರೊಂದಿಗೆ ಗೃಹ ಸಚಿವ ಬಸವರಾಜ್ ಮಾತನಾಡಿದ ಅವರು, ದೇಶ ವಿರೋಧಿ ಕೃತ್ಯದಲ್ಲಿ ಭಾಗಿಯಾದವರ ಬಗ್ಗೆ  ಚರ್ಚಿಸಲು ಉನ್ನತ ಮಟ್ಟದ ಪೊಲೀಸ್ ಅಧಿಕಾರಿಗಳ ಸಭೆ ಭಾನುವಾರ ಬೆಂಗಳೂರಿನಲ್ಲಿ ನಡೆಯಲಿದ್ದು, ಸಮಗ್ರವಾಗಿ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.

ದೇಶದ್ರೋಹಿ ಹೇಳಿಕೆ ನೀಡಿದ ಅಮೂಲ್ಯ ಪೇಸ್ ಬುಕ್ ನಲ್ಲಿ ಬರೆದುಕೊಂಡಿದ್ದಾಳೆ. ಇದಕ್ಕೆ ಕುಮ್ಮಕ್ಕು ನೀಡುವುದು. ಜತೆಗೆ ಕಾನೂನು ನೆರವಿ ನೀಡುವುದು ಸಹ ನಡೆಯುತ್ತಿದೆ. ಇದರ ಹಿಂದೆ ಕೆಲ ವ್ಯಕ್ತಿಗಳು ಹಾಗೂ ಸಂಘಟನೆಗಳು ಸಹ ಇದ್ದಾರೆ. ಈ ಎಲ್ಲ ವಿಚಾರಗಳ ಬಗ್ಗೆ ಭಾನುವಾರ ನಡೆಯುವ ಉನ್ನತ ಮಟ್ಟದ ಸಭೆಯಲ್ಲಿ ಸೂಕ್ತ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದರು.

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

Advertisement Enter ad code here
Advertisement

ದಾವಣಗೆರೆ

Advertisement

ಪ್ರಮುಖ ಸುದ್ದಿ

Advertisement
Advertisement e
Advertisement
To Top