ಡಿವಿಜಿ ಸುದ್ದಿ, ದಾವಣಗೆರೆ: ಪೌರಾಡಳಿತ, ತೋಟಗಾರಿಕೆ ಹಾಗೂ ರೇಷ್ಮೆ ಸಚಿವ ಸಚಿವ ಡಾ.ನಾರಾಯಣ ಗೌಡ ಅವರು ಸೆ. 10 ರಂದು ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.
ಸೆ.10 ರಂದು ಬೆಳಿಗ್ಗೆ 10 ಗಂಟೆಗೆ ಜಿಲ್ಲಾ ಪ್ರವಾಸಿ ಮಂದಿರಕ್ಕೆ ಆಗಮಿಸುವರು. ನಂತರ 10.30ಕ್ಕೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿರುವ ತುಂಗಭದ್ರ ಸಭಾಂಗಣದಲ್ಲಿ ನಡೆಯುವ ಪೌರಾಡಳಿತ, ತೋಟಗಾರಿಕೆ ಹಾಗೂ ರೇಷ್ಮೆ ಇಲಾಖೆಗಳಿಗೆ ಸಂಬಂಧಪಟ್ಟ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸುವರು. ಮಧ್ಯಾಹ್ನ 12.30 ಗಂಟೆಗೆ ದಾವಣಗೆರೆ ಯಿಂದ ಹೊರಟು ಮಧ್ಯಾಹ್ನ 2 ಗಂಟೆಗೆ ಹಾವೇರಿ ತಲುಪುವರು.



