ಡಿವಿಜಿ ಸುದ್ದಿ, ಬೆಂಗಳೂರು: ಕೊರೊನಾ ವೈರಸ್ ಲಾಕ್ ಡೌನ್ ಸಡಿಲಗೊಳಿಸಿದ್ದರಿಂದ ಇನ್ಮುಂದೆ ಅಂತರ್ ಜಿಲ್ಲೆಗಳ ಮಧ್ಯೆ ಸಂಚರಿಸುವ ಖಾಸಗಿ ವಾಹನಗಳಿಗೆ ಪಾಸ್ ಅಗತ್ಯವಿಲ್ಲ ಎಂದು ಡಿಜಿಪಿ ಕರ್ನಾಟಕ ಟ್ವೀಟ್ ಮಾಡಿದ್ದಾರೆ.
Pass is not required for inter district movement now. However keep your travel to bare essential. And don’t forget lockdown between 7 pm and 7 am.
— DGP KARNATAKA (@DgpKarnataka) May 20, 2020
ಲಾಕ್‍ಡೌನ್ 3 ಜಾರಿಯಾದಾಗ ಯಾವೆಲ್ಲ ಷರತ್ತುಗಳು ಇತ್ತೋ ಆ ಎಲ್ಲ ಷರತ್ತುಗಳು ಅನ್ವಯವಾಗುತ್ತದೆ. ಆದರೆ, ಪಾಸ್ ಪಡೆಯುವ ನಿಯಮವನ್ನು ಈಗ ಕೈಬಿಡಲಾಗಿದ್ದು, ಅಂತರ್ ಜಿಲ್ಲೆಗೆ ಯಾವುದೇ ಪಾಸ್ ಇಲ್ಲದೆ ಓಡಾಡಬಹುದು ಎಂದರು.
ಪೊಲೀಸರಿಗೆ ಐಡಿ ಕಾರ್ಡ್ ತೋರಿಸಿದರೆ ಅನುಮತಿ ನೀಡಲಾಗುತ್ತದೆ. ಹಾಗೆಯೇ ಟ್ಯಾಕ್ಸಿ ಯಲ್ಲಿ ಚಾಲಕರೊಂದಿಗೆ ಇಬ್ಬರು, ಮ್ಯಾಕ್ಸಿ ಕ್ಯಾಬ್ ನಲ್ಲಿ ಮೂರು ಜನ ಮತ್ತು ಚಾಲಕರು ಪ್ರಯಾಣಿಸಲು ಅನುಮತಿ ನೀಡಲಾಗುತ್ತದೆ. ಆದರೆ, ಲಾಕ್‍ಡೌನ್ ನಿಯಮವನ್ನು ಪಾಲಿಸಬೇಕು, ಸಂಜೆ 7 ಗಂಟೆಯಿಂದ ಬೆಳಗ್ಗೆ 7 ಗಂಟೆಯವರೆಗೆ ಯಾವುದೇ ಖಾಸಗಿ ವಾಹನಗಳು ಸಂಚರಿಸುವಂತಿಲ್ಲ ಎಂದು ತಿಳಿಸಿದೆ.



