ವಾಷಿಂಗ್ಟನ್: ಅಮೆರಿಕದಲ್ಲಿ ಡೆಡ್ಲಿ ಕೊರೊನಾಗೆ 11ಮಂದಿ ಭಾರತೀಯರು ಸಾವನ್ನಪ್ಪಿದ್ದು, 16 ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ.
ಹತ್ತು ಮಂದಿ ನ್ಯೂಯಾರ್ಕ್ ಮತ್ತು ನ್ಯೂಜೆರ್ಸಿಯಲ್ಲಿ ವಾಸವಿದ್ದವರು. ನಾಲ್ಕು ಮಂದಿ ನ್ಯೂಯಾರ್ಕ್ ನಗರದಲ್ಲಿ ಚಾಲಕರಾಗಿ ಕೆಲಸ ಮಾಡುತ್ತಿದ್ದರು. ಕೊರೊನಾ ಸೋಂಕು ಹರಡುವುದನ್ನುತಡೆಗಟ್ಟುವ ಸಲುವಾಗಿ ಕಟ್ಟುನಿಟ್ಟಿನ ಕ್ರಮಗಳನ್ನು ಜಾರಿಗೊಳಿಸಲಾಗಿದೆ.
ಅಮೆರಿಕದಲ್ಲಿ ಪರಿಸ್ಥಿತಿ ತೀವ್ರ ಸ್ವರೂಪವಾಗಿದ್ದು , 14 ಸಾವಿರ ಮಂದಿ ಪ್ರಾಣಕಳೆದುಕೊಂಡಿದ್ದಾರೆ. 4 ಲಕ್ಷಕ್ಕೂಅಧಿಕ ಮಂದಿಯನ್ನು ಈ ಸೋಂಕು ಕಾಡುತ್ತಿದೆ. ಅಮೆರಿಕಾದ ನ್ಯೂಯಾರ್ಕ್‌ನಲ್ಲಿ ಹೆಚ್ಚು ಕೊರೊನಾ ಸೋಂಕು ಕಾಡುತ್ತಿದ್ದು, ಇಲ್ಲಿ 6 ಸಾವಿರಕ್ಕೂ ಹೆಚ್ಚು ಮಂದಿಸಾವನ್ನಪ್ಪಿದ್ದು, 1 ಲಕ್ಷದ 38 ಸಾವಿರ ಮಂದಿಗೆ ಸೋಂಕು ತಗುಲಿದೆ. ನ್ಯೂಜೆರ್ಸಿಯಲ್ಲಿ 1500 ಮಂದಿ ಸಾವನ್ನಪ್ಪಿದ್ದರೆ, 48 ಸಾವಿರ ಮಂದಿಗೆ ಸೋಂಕು ತಗುಲಿದೆ.
16 ಮಂದಿ ಭಾರತೀಯರು ಸ್ವಯಂ ಕ್ವಾರಂಟೈನ್‌ಗೆ ಒಳಗಾಗಿದ್ದಾರೆ. ಇವರಲ್ಲಿ ಎಂಟು ಮಂದಿ ನ್ಯೂಯಾರ್ಕ್, ಮೂರು ಮಂದಿ ನ್ಯೂಜೆರ್ಸಿ, ಉಳಿದವರು ಟೆಕ್ಸಾಸ್ ಮತ್ತು ಕ್ಯಾಲಿಫೋರ್ನಿಯಾದ ಇತರೆ ರಾಜ್ಯಗಳಿಂದ ಬಂದವರು. ಇವರೆಲ್ಲಾ ಭಾರತದ ಉತ್ತರಾಖಂಡ, ಮಹಾರಾಷ್ಟ್ರ, ಕರ್ನಾಟಕ ಮತ್ತು ಉತ್ತರಪ್ರದೇಶ ಮೂಲದವರು ಎಂದು ತಿಳಿದುಬಂದಿದೆ.
ಅಮೆರಿಕಾದಲ್ಲಿ ಕೊರೊನಾ ಸೋಂಕು ತಗುಲಿರುವ ಭಾರತೀಯ ಪ್ರಜೆಗಳಿಗೆ ಹಾಗೂ ವಿದ್ಯಾರ್ಥಿಗಳಿಗೆ ಭಾರತೀಯ ರಾಯಭಾರ ಕಚೇರಿ ಮತ್ತು ಸ್ಥಳೀಯ ಅಧಿಕಾರಿಗಳು ಸಂಪರ್ಕದಲ್ಲಿದ್ದಾರೆ.



