ಢಾಕಾ: ಬಾಂಗ್ಲಾದೇಶದಲ್ಲಿ ಇಂದು ಸಂಭವಿಸಿದ ದೋಣಿ ದುರಂತದಲ್ಲಿ 23 ಪ್ರಯಾಣಿಕರು ಸಾವನ್ನಪ್ಪಿದ್ದಾರೆ. ಬುರಿಗಂಗಾ ನದಿಯಲ್ಲಿ ದೋಣಿ ಮುಳುಗಿ ಅವಘಡ ಸಂಭವಿಸಿದೆ.
ದೋಣಿಯಲ್ಲಿ ಸುಮಾರು 50 ಪ್ರಯಾಣಿಕರಿದ್ದರು. ಮೃತರಲ್ಲಿ ಮೂವರು ಮಕ್ಕಳು, ಆರು ಮಂದಿ ಮಹಿಳೆಯರು ಇದ್ದರು. ಕೆಲ ಪ್ರಯಾಣಿಕರು ಈಜಿ ದಡ ಸೇರಿದ್ದಾರೆ. ಇನ್ನೂ ಕೆಲವರು ನಾಪತ್ತೆಯಾಗಿದ್ದಾರೆ.
ನಾಪತ್ತೆಯಾದವರಿಗಾಗಿ ಹುಡುಕಾಟ ನಡೆದಿದೆ. ಇದುವರೆಗೂ ಒಟ್ಟು 23 ಶವಗಳನ್ನು ಹೊರತೆಗೆಯಲಾಗಿದೆ ಎಂದು ತಿಳಿಸಿದ್ದಾರೆ.



