ಕಠ್ಮಂಡು: ನೇಪಾಳದ ಪ್ರಮುಖ ಜಲಾನಯನ ಪ್ರದೇಶಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ನದಿಗಳಲ್ಲಿ ಪ್ರವಾಹ ಉಂಟಾಗಿ ತಗ್ಗು ಪ್ರದೇಶದಲ್ಲಿರುವ ಗ್ರಾಮಗಳಿಗೆ ನೀರು ನುಗ್ಗಿದೆ. ಇದರಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ.
ನಿನ್ನೆ ರಾತ್ರಿ ಸುರಿಯುತ್ತಿರುವ ಮಳೆಯಿಂದಾಗಿ ತಗ್ಗು ಪ್ರದೇಶ ಗ್ರಾಮಳು ಸಂಪೂರ್ಣ ಜಲಾವೃತಗೊಂಡಿವೆ. ಇದರಿಂದ ಿಲ್ಲಿನ ಜನರು ತೀವ್ರ ಸಂಕಷ್ಟ ಅನುಭವಿಸುತ್ತಿದ್ಧಾರೆ. ಇಲ್ಲಿನ ನಗರಿಗಳಾದ ಕಮ್ಲಾ, ಬಾಗ್ಮತಿ, ಗಂಡಕ್ ಮತ್ತು ಕೋಸಿ ನದಿಗಳ ಸುತ್ತಮುತ್ತ ಭಾರಿ ಮಳೆಯಾಗುತ್ತಿದೆ.
ನದಿಗಳು ಭಾರೀ ಪ್ರಮಾಣದಲ್ಲಿ ಉಕ್ಕಿ ಹರಿಯುತ್ತಿದ್ದು, ಕೆಲವು ಮನೆಗಳು ಪ್ರವಾಹದಲ್ಲಿ ಕೊಚ್ಚಿಹೋಗಿವೆ.
ನೇಪಾಳದಲ್ಲಿ ಶುಕ್ರವಾರ, ಶನಿವಾರವೂ ಮಳೆಯಾಗುವ ಸಾಧ್ಯತೆ ಇದು ಎಂದು ಅಲ್ಲಿನ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ನೇಪಾಳ ನದಿಗಳಲ್ಲಿ ಪ್ರವಾಹ ಕಾಣಿಸಿಕೊಂಡಿದ್ದರಿಂದ ಜಲಾನಯನ ಪ್ರದೇಶದಲ್ಲಿರುವ ಬಿಹಾರದ ಉತ್ತರ ಭಾಗದ ಜನರು ತೀವ್ರ ಆತಂಕಗೊಂಡಿದ್ದಾರೆ. ಈ ಕಾರಣದಿಂದಾಗಿ ಬಿಹಾರ ನೀರಾವರಿ ಇಲಾಖೆ ತಗ್ಗು ಪ್ರದೇಶದ ಜನರಿಗೆ ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಿದೆ.



