ಇಸ್ಲಾಮಾಬಾದ್: ದಾವೂದ್ ಇಬ್ರಾಹಿಂ, ಹಫೀಜ್ ಸಯೀದ್, ಮಸೂದ್ ಅಜರ್ ಮತ್ತು ಇತರ ಉಗ್ರ ನಾಯಕರ ಎಲ್ಲ ಆಸ್ತಿ, ಬ್ಯಾಂಕ್ ಖಾತೆಗಳನ್ನು ಮುಟ್ಟುಗೋಲು ಹಾಕಿಕೊಳ್ಳುವಂತೆ ಪಾಕಿಸ್ತಾನ ಸರ್ಕಾರ ಆದೇಶಿಸಿದೆ. ಇದರಲ್ಲಿ ದಾವೂದ್‌ನ ಕರಾಚಿ ವಿಳಾಸವೂ ಸೇರಿದೆ. ಈ ಮೂಲಕ ದಾವೂದ್ ಪಾಕಿಸ್ತಾನದಲ್ಲಿ ಇರುವುದನ್ನು ಒಪ್ಪಿಕೊಂಡಂತಾಗಿದೆ.
ದಾವೂದ್ ಇಬ್ರಾಹಿಂ, ಹಫೀಜ್ ಸಯೀದ್, ಮಸೂದ್ ಅಜರ್ ಮತ್ತು ನಿಷೇಧಿತ 88 ಉಗ್ರ ಸಂಘಟನೆಗಳು, ಅವುಗಳ ನಾಯಕರ ಮೇಲೆ ಪಾಕಿಸ್ತಾನ ಹಣಕಾಸು ನಿರ್ಬಂಧ ವಿಧಿಸಿದೆ.
ಭಯೋತ್ಪಾದಕರಿಗೆ ಹಣಕಾಸು ನೆರವು ನೀಡುವುದರ ಮೇಲೆ ನಿಗಾ ಇಡುವ ಜ ಮಟ್ಟದ ಸಂಸ್ಥೆ ಹಣಕಾಸು ಕಾರ್ಯಪಡೆಯ (ಎಫ್‌ಎಟಿಎಫ್) ‘ಬೂದು ಪಟ್ಟಿ’ಯಲ್ಲಿ ಗುರುತಿಸಿಕೊಳ್ಳುವುದನ್ನು ತಪ್ಪಿಸಿಕೊಳ್ಳಲು ಈ ಕ್ರಮ ಕೈಗೊಳ್ಳಲಾಗಿದೆ. ಈ ಮೂಲಕ ದಾವೂದ್ ಇಬ್ರಾಹಿಂ ಪಾಕಿಸ್ತಾನದಲ್ಲಿ ಇರುವುದನ್ನು ಆ ದೇಶ ಅಧಿಕೃತವಾಗಿ ಒಪ್ಪಿಕೊಂಡಂತಾಗಿದೆ.



