ಕೀವ್: ಇರಾನ್ ರಾಜಧಾನಿ ಟೆಹರಾನ್‌ನಿಂದ ಉಕ್ರೇನ್‌ನ ಕೀವ್‌ಗೆ ಹೊರಟಿದ್ದ ಉಕ್ರೇನ್ ಇಂಟರ್‌ನ್ಯಾಷನಲ್ ಏರ್‌ಲೈನ್ಸ್‌ನ ಬೋಯಿಂಗ್ 737 ವಿಮಾನ ಪತನಗೊಂಡಿದದೆ. ವಿಮಾನದಲ್ಲಿದ್ದ 168 ಪ್ರಯಾಣಿಕರು ಸಹಿತ, 9 ಸಿಬ್ಬಂದಿ ಮೃತಪಟ್ಟಿದ್ದಾರೆ ಎಂದು ಉಕ್ರೇನ್ ಅಧ್ಯಕ್ಷ ವೊಲೊಡಿಮಿಲ್ ಝಿಲೆಂಸ್ಕಿ ಖಚಿತಪಡಿಸಿದ್ದಾರೆ.

ಇರಾನ್ ಮತ್ತು ಅಮೆರಿಕ ನಡುವೇ ಈಗಾಗಲೇ ಯುದ್ಧ ಭೀತಿ ಉಂಟಾಗಿದೆ. ಉಕ್ರೇನ್ ವಿಮಾನ ಪತನಕ್ಕೂ, ಇರಾನ್ –ಅಮೆರಿಕಾ ಸಂಘಷರ್ಷಕ್ಕೂ ಸಂಬಂಧವಿದೆಯಾ ಎಂಬ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ ಎಂದು ಬಿಬಿಸಿ ವರದಿ ಮಾಡಿದೆ

ಟೆಹರಾನ್ ವಿಮಾನ ನಿಲ್ದಾಣದಿಂದ ಬುಧವಾರ ನಸುಕಿನಲ್ಲಿ ಟೇಕ್‌ಆಫ್ ಆಗಿದ್ದ ವಿಮಾನವು ಕೀವ್‌ಗೆ ಬೆಳಿಗ್ಗೆ 8ಕ್ಕೆ ಲ್ಯಾಂಡ್ ಆಗಬೇಕಿತ್ತು. ತಾಂತ್ರಿಕ ಕಾರಣಗಳಿಂದ ವಿಮಾನ ಪತನಗೊಂಡಿರಬಹುದು ಎಂದು ಟೆಹರಾನ್‌ನ ಇಮಾಂ ಖಮೇನಿ ಅಂತರರಾಷ್ಟ್ರೀಯ ವಿಮಾನ ಪ್ರತಿಕ್ರಿಯಿಸಿದೆ.
ಪ್ರಾಥಮಿಕ ವರದಿಗಳ ಪ್ರಕಾರ ಪ್ರಯಾಣಿಸುತ್ತಿದ್ದ ಎಲ್ಲಾ ಪ್ರಯಾಣಿಕರು ಮತ್ತು ವೈಮಾನಿಕ ಸಿಬ್ಬಂದಿ ಮೃತಪಟ್ಟಿದ್ದಾರೆ. ಇರಾನ್‌ನಲ್ಲಿರುವ ನಮ್ಮ ರಾಯಭಾರ ಕಚೇರಿ ಸಿಬ್ಬಂದಿ ದುರಂತದ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದಾರೆ. ಮೃತರ ಹೆಸರುಗಳನ್ನು ಪಟ್ಟಿ ಮಾಡುತ್ತಿದ್ದಾರೆ ಎಂದು ಫೇಸ್ ಬುಕ್ ನಲ್ಲಿ ಝಿಲೆಂಸ್ಕಿ ಮಾಹಿತಿ ಹಂಚಿಕೊಂಡಿದ್ದಾರೆ.



