Connect with us

Dvg Suddi-Kannada News

ದಾವಣಗೆರೆಯಲ್ಲಿ 27 ಅಂಗನವಾಡಿ ಕಾರ್ಯಕರ್ತೆಯರು, 87 ಸಹಾಯ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ

ದಾವಣಗೆರೆ

ದಾವಣಗೆರೆಯಲ್ಲಿ 27 ಅಂಗನವಾಡಿ ಕಾರ್ಯಕರ್ತೆಯರು, 87 ಸಹಾಯ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ

ಡಿವಿಜಿ ಸುದ್ದಿ, ದಾವಣಗೆರೆ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ 27 ಅಂಗನವಾಡಿ ಕಾರ್ಯಕರ್ತೆಯರು ಹಾಗೂ 87 ಸಹಾಯಕಿಯರ ಹುದ್ದೆಗಳಿಗೆ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ದಾವಣಗೆರೆ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ದಾವಣಗೆರೆ, ಜಗಳೂರು, ಹರಿಹರ, ಹೊನ್ನಾಳಿ ಮತ್ತು ಚನ್ನಗಿರಿ ತಾಲ್ಲೂಕಿನ ಶಿಶು ಅಭಿವೃದ್ಧಿ ಯೋಜನೆಗಳ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಒಟ್ಟು 27 ಅಂಗನವಾಡಿ ಕಾರ್ಯಕರ್ತೆಯರು ಹಾಗೂ 87 ಅಂಗನವಾಡಿ ಸಹಾಯಕಿಯರ ಗೌರವ ಸೇವೆಯ ಹುದ್ದೆಗಳಿಗೆ ನೇಮಕ ಮಾಡಲು ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಹ ಅಭ್ಯರ್ಥಿಗಳು ಡಿ.23 ರಿಂದ http://davanagere.nic.in ವೆಬ್‍ಸೈಟ್‍ನಲ್ಲಿ ಅರ್ಜಿ ಸಲ್ಲಿಸಬಹುದಾಗಿದ್ದು, 2020 ರ ಜನವರಿ 23 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.ಹೆಚ್ಚಿನ ಮಾಹಿತಿಗಾಗಿ ದಾವಣಗೆರೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ ದೂರವಾಣಿ ಸಂಖ್ಯೆ 08192-263219 ಸಂಪರ್ಕಿಸಬಹುದು.

  •  ಹರಿಹರದ ಶಿಶು ಅಭಿವೃದ್ಧಿ ಯೋಜನಾಧಿಕಾರಿ: 08192-241431
  •  ಜಗಳೂರು ಶಿಶು ಅಭಿವೃದ್ಧಿ ಯೋಜನಾಧಿಕಾರಿ: 08196-227132
  •  ಹೊನ್ನಾಳಿ ಶಿಶು ಅಭಿವೃದ್ಧಿ ಯೋಜನಾಧಿಕಾರಿ:  08188-251283
  •  ಚನ್ನಗಿರಿ ಶಿಶು ಅಭಿವೃದ್ಧಿ ಯೋಜನಾಧಿಕಾರಿ: 08189-228010

 

 

 

 

Click to comment

Leave a Reply

Your email address will not be published. Required fields are marked *

More in ದಾವಣಗೆರೆ

Advertisement Enter ad code here
Advertisement

ದಾವಣಗೆರೆ

Advertisement

ಪ್ರಮುಖ ಸುದ್ದಿ

Advertisement
Advertisement e
Advertisement
To Top