Connect with us

Dvg Suddi-Kannada News

 ರಾಜ್ಯ ಸರ್ಕಾರದಿಂದ 1,112 FDA ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಪ್ರಮುಖ ಸುದ್ದಿ

 ರಾಜ್ಯ ಸರ್ಕಾರದಿಂದ 1,112 FDA ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಡಿವಿಜಿ ಸುದ್ದಿ, ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ ಮೂಲಕ ರಾಜ್ಯ ಸರ್ಕಾರವು  ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 1,112 ಸಹಾಯಕ ಹಾಗೂ ಪ್ರಥಮ ದರ್ಜೆ ಸಹಾಯಕ ಹುದ್ದೆಗಳ ನೇಮಕಾತಿಗೆ  ಅರ್ಜಿ ಆಹ್ವಾನಿಸಿದೆ.

ಪದವಿ ಪಡೆದಿರುವ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು. ಒಟ್ಟು 27 ವಿವಿಧ ಇಲಾಖೆಗಳಲ್ಲಿ  ಖಾಲಿ ಇರುವ 1112 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದ್ದು. ಈ ಹುದ್ದೆಗಳಲ್ಲಿ 137 ಹುದ್ದೆಗಳನ್ನು ಕಲ್ಯಾಣ ಕರ್ನಾಟಕ ಭಾಗಕ್ಕೆ ಮೀಸಲಿಡಲಾಗಿದೆ.  ಅರ್ಜಿ ಸಲ್ಲಿಸಲ್ಲಿಸಲು  ಕರ್ನಾಟಕ ಲೋಕಸೇವಾ ಆಯೋಗದ ವೆಬ್‌ಸೈಟ್‌:  www.kpsc.kar.nic.in ಲಾಗಿನ್‌ ಆಗಿ ಅನ್‌ಲೈನ್ ಮೂಲಕ ಅರ್ಜಿ  ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಮಾ. 6 ರಂದು ಕೊನೆಯ ದಿನಾಂಕವಾಗಿದೆ. ಪರೀಕ್ಷೆಯು ಮೇ . 10 ರಂದು ನಡೆಯಲಿದೆ.  ವೇತನ ಸಹಾಯಕ ಹುದ್ದೆಗೆ 30,350 –  58,250 ವರೆಗೆ ಹಾಗೂ  ಪ್ರಥಮ ದರ್ಜೆ ಸಹಾಯಕ ಹುದ್ದೆಗೆ 27,650-  52, 650 ನಿಗದಿ ಮಾಡಲಾಗಿದೆ.

ಹುದ್ದೆಗಳ ಸಂಖ್ಯೆ1112 ( 137 ಹುದ್ದೆಗಳು ಕಲ್ಯಾಣ ಕರ್ನಾಟಕ )

ವಿದ್ಯಾರ್ಹತೆ: ಅಂಗೀಕೃತ ವಿಶ್ವವಿದ್ಯಾಲಯಗಳಿಂದ ಯಾವುದೇ ವಿಷಯದಲ್ಲಿ ‌ಪದವಿ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಹೊಂದಿರಬೇಕು

ವೇತನ ಶ್ರೇಣಿ

1) ಸಹಾಯಕ ಹುದ್ದೆ: 30,350 – 58,250

2) ಪ್ರಥಮ ದರ್ಜೆ ಸಹಾಯಕ:  27,650- 52, 650

ವಯಸ್ಸು:

ಕನಿಷ್ಠ 21 ವರ್ಷಗಳಾಗಿರಬೇಕು.

ಸಾಮಾನ್ಯ ವರ್ಗದ ಅಭ್ಯರ್ಥಿಗಳು– ಗರಿಷ್ಠ 35 ವರ್ಷ

ಹಿಂದುಳಿದ ವರ್ಗದ ಅಭ್ಯರ್ಥಿಗಳು– ಗರಿಷ್ಠ 38 ವರ್ಷ

ಪ.ಜಾತಿ, ಪ.ಪಂಗಡ, ಪ್ರವರ್ಗ-1 ಅಭ್ಯರ್ಥಿಗಳು– 40 ವರ್ಷ

ಅರ್ಜಿ ಶುಲ್ಕ

  •  ಸಾಮಾನ್ಯ ವರ್ಗದ ಅಭ್ಯರ್ಥಿಗಳು– 600
  •  ಹಿಂದುಳಿದ ವರ್ಗದ ಅಭ್ಯರ್ಥಿಗಳು– 300
  •  ಮಾಜಿ ಸೈನಿಕರು- 50
  • ಎಸ್ ಸಿ , ಎಸ್ ಟಿ : ಪ್ರೋಸೆಸಿಂಗ್ ಚಾರ್ಜ್ : 35

ನೇಮಕಾತಿ ವಿಧಾನ: ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.  ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದವರ ಮೇರಿಟ್‌ ಲಿಸ್ಟ್‌ ತಯಾರಿಸಿ ಮೀಸಲಾತಿ ಅನ್ವಯ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಸುವ ವಿಧಾನ: ಅರ್ಜಿ ಸಲ್ಲಿಸಬಹುದಾದ ಅಭ್ಯರ್ಥಿಗಳು ಕರ್ನಾಟಕ ಲೋಕಸೇವಾ ಆಯೋಗದ ವೆಬ್‌ಸೈಟ್‌ಗೆ www.kpsc.kar.nic.in ಲಾಗಿನ್‌ ಆಗಿ ಅನ್‌ಲೈನ್ ಮೂಲಕ ಅರ್ಜಿ ಭರ್ತಿ ಮಾಡಬೇಕು.

  • ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ : 06-03-2020
  •  ಸ್ಪರ್ಧಾತ್ಮಕ ಪರೀಕ್ಷೆ ದಿನಾಂಕ : 10-05-2020
  •  ಕೆಪಿಎಸ್ಸಿ ವೆಬ್ಸೈಟ್‌: http://www.kpsc.kar.nic.in/

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

Advertisement Enter ad code here
Advertisement

ದಾವಣಗೆರೆ

Advertisement

ಪ್ರಮುಖ ಸುದ್ದಿ

News

Advertisement
Advertisement e

ಸಿದ್ದನೂರು ಮತ್ತು ಅಗಸನಕಟ್ಟೆಯ ನಿಕ್ರಾ ಯೋಜನೆಯ ದೃಶ್ಯಾವಳಿ

Advertisement
To Top