ಡಿವಿಜಿ ಸುದ್ದಿ,ದಾವಣಗೆರೆ: ಸೇನಾ ನೇಮಕಾತಿ ಕಚೇರಿ ಮಂಗಳೂರು ವತಿಯಿಂದ ಏ.4 ರಿಂದ 14 ರವರೆಗೆ ಉಡುಪಿ ಜಿಲ್ಲಾ ಕ್ರೀಡಾಂಗಣದಲ್ಲಿ ಭಾರತೀಯ ಸೇನಾ ನೇಮಕಾತಿ ರ್ಯಾಲಿಯನ್ನು ಆಯೋಜಿಸಿದೆ.

ಕರ್ನಾಟಕದ ಬಾಗಲಕೋಟೆ, ವಿಜಯಪುರ, ಧಾರವಾಡ, ಚಿಕ್ಕಮಗಳೂರು, ದಾವಣಗೆರೆ, ದಕ್ಷಿಣ ಕನ್ನಡ, ಉಡುಪಿ, ಗದಗ, ಹಾವೇರಿ, ಶಿವಮೊಗ್ಗ, ಉತ್ತರ ಕನ್ನಡ ಜಿಲ್ಲೆಯ ಅಭ್ಯರ್ಥಿಗಳು ಪಾಲ್ಗೊಳ್ಳಬಹುದಾಗಿದೆ. ಆಸಕ್ತ ಅಭ್ಯರ್ಥಿಗಳು ಫೆ.16 ರಿಂದ ಮಾರ್ಚ್ 20 ರವರೆಗೆ ಭಾರತೀಯ ಸೇನಾ ನೇಮಕಾತಿಯ ವೆಬ್‍ಸೈಟ್ www.joinindianarmy.nic.in ನಲ್ಲಿ ನೋಂದಾಯಿಸಿಕೊಳ್ಳಬಹುದು ಎಂದು ಪ್ರಕಟಣೆ ತಿಳಿಸಿದೆ.



