
ಕಲಾಕುಂಚ ಸಂಸ್ಥೆ ಶಿರಮಗೊಂಡನಹಳ್ಳಿಯ ವಿಶ್ವಚೇತನ ವಿದ್ಯಾನಿಕೇತನ ವಿದ್ಯಾಸಂಸ್ಥೆಯ ಆವರಣದಲ್ಲಿ ಆಯೋಜಿಸಿದ್ದ ವಿದ್ಯಾರ್ಥಿಗಳಿಗೆ ಪರೀಕ್ಷಾ ಪೂರ್ವ ಸಿದ್ಧತಾ ಕಾರ್ಯಾಗಾರವನ್ನು ಡಾ. ನಾಡೋಜ ಸೋಮೇಶ್ವರ ಉದ್ಘಾಟಿಸಿದರು. ವಿದ್ಯಾಸಂಸ್ಥೆಯ ಅಧ್ಯಕ್ಷ ಡಾ. ವಿಜಯಲಕ್ಷ್ಮಿ ವೀರಮಾಚಿನೇನಿ, ದಾವಣಗೆರೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಬಿ. ವಾಮದೇವಪ್ಪ, ಪ್ರಕಾಶಕ ಎಸ್.ಎಸ್. ಹಿರೇಮಠ, ಸರಸ್ವತಿ ದಾಸಪ್ಪ ಶೆಣೈ ಪ್ರತಿಷ್ಠಾನ ಸಂಸ್ಥಾಪಕ ಸಾಲಿಗ್ರಾಮ ಗಣೇಶ್ ಶೆಣೈಯವರು ಉಪಸ್ಥಿತರಿದ್ದರು.



