ಡಿವಿಜಿ ಸುದ್ದಿ, ಬೆಂಗಳೂರು: ಬೆಳಗಾವಿ ಪೀರನವಾಡಿಯಲ್ಲಿ ಸಂಗೊಳ್ಳಿರಾಯಣ್ಣ ಪ್ರತಿಮೆಯ ಪ್ರತಿಷ್ಠಾಪನೆ ವಿವಾದವನ್ನು ಶಾಂತಿಯುತವಾಗಿ ಬಗೆಹರಿಸುವಂತೆ ಕಾಗಿನೆಲೆ ಕನಕ ಗುರುಪೀಠದ ನಿರಂಜನಾನಂದ ಸ್ವಾಮೀಜಿ ಅವರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನಿವಾಸದಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಿದರು.
ಶ್ರೀಗಳ ಆಶೀರ್ವಾದ ಪಡೆದ ಬಿ.ಎಸ್.ಯಡಿಯೂರಪ್ಪ ಅವರು, ಸಮಸ್ಯೆಯನ್ನು ಶೀಘ್ರವೇ ಬಗೆಹರಿಸುವುದಾಗಿ ತಿಳಿಸಿದರು.
ಕಾನೂನಿನ ತೊಡಕುಗಳನ್ನು ನಿವಾರಿಸಲು ಸ್ವಲ್ಪ ಸಮಯಾವಕಾಶ ಬೇಕಾಗುತ್ತದೆ. ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಅವರು ಕಾರ್ಯ ಪ್ರವೃತ್ತರಾಗಲಿದ್ದಾರೆ ಇದೇ ವೇಳೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದರು.
ಆಗಸ್ಟ್ 14 ರಂದು ಸಂಗೊಳ್ಳಿ ರಾಯಣ್ಣ ಪ್ರತಿಮೆ ಸ್ಥಾಪಿಸಲಾಗಿತ್ತು. ಅದನ್ನು ಸ್ಥಳೀಯ ಆಡಳಿತ ತೆರವುಗೊಳಿಸಿತ್ತು. ಪ್ರತಿಮೆ ತೆರವು ವಿರೋಧಿಸಿ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿದ್ದಾರೆ.



