ಡಿವಿಜಿ ಸುದ್ದಿ, ಬೆಂಗಳೂರು: ಹೈಕೋರ್ಟ್ ತೀರ್ಪುಗಳು ಕನ್ನಡದಲ್ಲಿ ಬರುವಂತಾದರೆ ಸಾಮಾನ್ಯ ಜನರಿಗೆ ಅನುಕೂಲವಾಗಲಿದೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್.ನಾಗಾಭರಣ ಅಭಿಪ್ರಾಯಪಟ್ಟರು.
ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಆಯೋಜಿಸಿದ್ದ ನ್ಯಾಯಾಂಗದಲ್ಲಿ ಕನ್ನಡ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅವರು ಮಾತನಾಡಿದರು.
ಕನ್ನಡದಲ್ಲಿ ಆದೇಶ ಬರೆಯಿಸಿದ ನ್ಯಾಯಾಧೀಶರು ಹಾಗೂ ಕನ್ನಡದಲ್ಲಿ ವಾದ ಮಂಡಿಸಿದ ಸರ್ಕಾರಿ ಅಭಿಯೋಜಕರು ಹಾಗೂ ವಕೀಲರಿಗೆ ‘ನ್ಯಾಯಾಂಗ ಕನ್ನಡ ಪ್ರಶಸ್ತಿ’ಯನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪ್ರದಾನ ಮಾಡಿದರು.



