ಡಿವಿಜಿ ಸುದ್ದಿ, ಬೆಂಗಳೂರು: ಕನ್ನಡ ಹಾಸ್ಯ ನಟ ಮಿಮಿಕ್ರಿ ರಾಜಗೋಪಾಲ್ (69) ಇಂದು ವಿಧಿವಶರಾಗಿದ್ದಾರೆ. ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ತಮ್ಮ ನಿವಾಸದಲ್ಲಿ ವಿಧಿವಶರಾಗಿದ್ದಾರೆ.
ಕಿಡ್ನಿ ಮತ್ತು ಅಸ್ತಮಾ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಕೆಂಗೇರಿಯ ಅವರ ಮನೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಕನ್ನಡ ಹಾಗೂ ಇತರೆ ಭಾಷೆಗಳಲ್ಲಿ ಹಾಸ್ಯನಟನಾಗಿ, ಪೋಷಕ ನಟನಾಗಿ ಅಭಿನಯಿಸಿದ್ದ ಅವರು ತಮಿಳು ಚಿತ್ರಗಳಲ್ಲಿಯೂ ತಮ್ಮ ಹಾಸ್ಯ ನಟನಾಗಿ ನಟಿಸಿದ್ದರು. ರಾಜಗೋಪಾಲ್ ಅವರ ನಿಧನಕ್ಕೆ ಕನ್ನಡ ಚಿತ್ರರಂಗ ಕಂಬನಿ ಮಿಡಿದಿದೆ. ಕನ್ನಡ ಸೇರಿದಂತೆ ಇತರೆ ಭಾಷೆಯಲ್ಲಿ 650ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟನೆ ಮಾಡಿದ್ದಾರೆ.
1983ರಿಂದ ಸಿನಿಮಾದಲ್ಲಿ ಅಭಿನಯಿಸಲು ಆರಂಭಿಸಿದರು. ಡಿಡಿ 1 ಆರಂಭವಾದಾಗಿನಿಂದ ಪಾಪ ಪಾಂಡು ವರೆಗೂ ಸುಮಾರು ಧಾರಾವಾಹಿಗಳಲ್ಲಿ ಅಭಿನಯಿಸಿದ್ದಾರೆ. ಹಲವು ಕಲಾವಿದರ ಧ್ವನಿಗಳನ್ನು ಅನುಕರಣೆ ಮಾಡುವುದರಲ್ಲಿ ಪರಿಣತರಾಗಿದ್ದ ಮಿಮಿಕ್ರಿ ರಾಜಗೋಪಾಲ್ ನಟಿ ಕಲ್ಪನಾ ಧ್ವನಿಯಲ್ಲೇ ಹೆಚ್ಚು ಜನಪ್ರಿಯರಾಗಿದ್ದಾರು. ಕಾಪಿಕಟ್ಟೆ, ರಿಯಲ್ ಪೊಲೀಸ್, ಸಾಧಕರು, ಗೋಸಿ ಗ್ಯಾಂಗ್, ಸೂಪರ್ ಪೊಲೀಸ್ ಮುಂತಾದ ಚಿತ್ರಗಳಲ್ಲಿ ನಟಿಸಿದ್ದಾರೆ.



