ಡಿವಿಜಿ ಸುದ್ದಿ, ಬೆಂಗಳೂರು: ಡೆಡ್ಲಿ ಕೊರೊನಾ ವೈರಸ್ ನಿಂದ ರಾಜ್ಯದ ಕನ್ನಡ ಚಿತ್ರರಂಗಕ್ಕೆ ಭಾರೀ ಹೊಡೆತ ನೀಡಿದ್ದು, ಶೇ. 50 ರಷ್ಟು ಜನರು ಚಿತ್ರ ಮಂದಿರ ಕಡೆ ಬರುತ್ತಿಲ್ಲ.
ನಗರದ ಬಹುತೇಕ ಚಿತ್ರಮಂದಿರಗಳು ಖಾಲಿ ಖಾಲಿ ಇದ್ದು, ಸಿನಿಮಾ ನೋಡುವವರ ಸಂಖ್ಯೆ ಶೇ. 50 ರಷ್ಟು ಕಡಿಮೆಯಾಗಿದೆ. ಪ್ರತಿ ಶುಕ್ರವಾರ ಸಿನಿಮಾ ರಿಲೀಸ್ ಆಗುತ್ತಿದ್ದಂತೆ ಭಾರೀ ಸಂಖ್ಯೆಯಲ್ಲಿ ಬರುತ್ತಿದ್ದ ಪ್ರೇಕ್ಷಕರ ಸಂಖ್ಯೆ ಇಂದು ಶೇ. 50 ರಷ್ಟು ಕಡಿಮೆಯಾಗಿತ್ತು.
ಇನ್ನು ಮಾರ್ಚ್ 21 ರಂದು ಕಲಬುರಗಿಯಲ್ಲಿ ರಾಬರ್ಟ್ ಸಿನಿಮಾ ಆಡಿಯೋ ಲಾಂಚ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕೊರೊನಾ ವೈರಸ್ ನಿಂದ ಈ ಕಾರ್ಯಕ್ರಮವನ್ನು ಕೂಡ ಮುಂದೂಡಲಾಗಿದೆ.



