ಡಿವಿಜಿ ಸುದ್ದಿ, ಬೆಂಗಳೂರು: ಸರೋಜಿನಿ ಮಹಿಷಿ ವರದಿ ಜಾರಿಗೆ ಆಗ್ರಹಿಸಿ ವಿವಿಧ ಕನ್ನಡ ಪರ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ಯಾವುದೇ ಶಾಲಾ, ಕಾಲೇಜ್ ರಜೆ ಇಲ್ಲ ಎಂದು ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದ್ದಾರೆ.
ಸಾರ್ವಜನಿಕ ಶಿಕ್ಷಣ ಇಲಾಖೆ ಯಾವುದೇ ಶಾಲಾ- ಕಾಲೇಜುಗಳಿಗೆ ಅಧಿಕೃತವಾಗಿ ರಜೆ ಘೋಷಣೆ ಮಾಡುವುದಿಲ್ಲ. ಆಯಾ ಜಿಲ್ಲಾಡಳಿತಗಳು ಸ್ಥಳೀಯ ಪರಿಸ್ಥಿತಿಗಳಿಗೆ ಅನುಗುಣವಾಗಿ ಕ್ರಮ ವಹಿಸಬಹುದಾಗಿದೆ ಎಂದು ಸೂಚಿಸಿದ್ದಾರೆ.



