ಡಿವಿಜಿ ಸುದ್ದಿ, ಬೆಳಗಾವಿ: ಸರೋಜಿನಿ ಮಹಿಷಿ ವರದಿ ಜಾರಿಗೆ ಆಗ್ರಹಿಸಿ ಫೆ. 13 ರಂದು ವಿವಿಧ ಕನ್ನಡ ಸಂಘಟನೆಗಳು ಕರೆ ನೀಡಿದ್ದ ಕರ್ನಾಕಟ ಬಂದ್‍ಗೆ ಕರವೇ ಬೆಂಬಲ ನೀಡುವುದಿಲ್ಲ ಎಂದು ರಾಜ್ಯಾಧ್ಯಕ್ಷ ನಾರಾಯಣಗೌಡ ಹೇಳಿದ್ದಾರೆ.
ಸರೋಜಿನಿ ಮಹಿಷಿ ವರದಿ ಜಾರಿ ವಿಚಾರವಾಗಿ ಕರವೇ ಹೋರಾಟ ಮುಂದುವರಿಯಲಿದೆ. ಆದರೆ, ಫೆ. 13 ರಂದು ನಡೆಯುವ ಬಂದ್‍ಗೆ ಕರವೇ ಯಾವುದೇ ರೀತಿಯ ಬೆಂಬಲ ನೀಡುವುದಿಲ್ಲ ಎಂದರು.
ಮಾರ್ಚ್ ತಿಂಗಳಲ್ಲಿ ವರದಿ ಅನುಷ್ಠಾನಕ್ಕೆ ಆಗ್ರಹಿಸಿ ಬೃಹತ್ ಜಾಥಾವನ್ನು ಕರವೇ ಆಯೋಜನೆ ಮಾಡಲಿದ್ದು, ಈ ಮೂಲಕ ಮುಖ್ಯಮಂತ್ರಿಗಳಿಗೆ ವರದಿ ಜಾರಿಗೆ ಒತ್ತಡ ಹಾಕಲಾಗುವುದು. ಹೀಗಾಗಿ ಫೆ13 ರಂದು ಬಂದ್ ನಲ್ಲಿ ಯಾವುದೇ ಕರವೇ ಕಾರ್ಯಕರ್ತರು ಭಾಗವಹಿಸುವುದಿಲ್ಲ ಎಂದು ತಿಳಿಸಿದರು.



