ಡಿವಿಜಿ ಸುದ್ದಿ, ಬೆಂಗಳೂರು: ರಾಜ್ಯ ಬಜೆಟ್ ನಲ್ಲಿ ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ ಮೂಲಕ ರಾಜ್ಯ ಸರ್ಕಾರ ಆದಾಯ ಹೆಚ್ಚಿಸಿಕೊಳ್ಳಲು ಮುಂದಾಗಿದೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಪೆಟ್ರೋಲಿಯಂ ಉತ್ಪನ್ನ ಮೇಲೆ ತೆರೆಗೆ ಹೆಚ್ಚಿಸಿದ್ದು, ಜನ ಸಾಮಾನ್ಯರ ಮೇಲೆ ಇನ್ನಷ್ಟು ಬರೆ ಬೀಳಿಲಿದೆ. ಇದರಿಂದ ಅಗತ್ಯ ವಸ್ತುಗಳ ಬೆಲೆ ಇನ್ನಷ್ಟು ತುಟ್ಟಿ ಆಗಲಿವೆ.
ಸಿಎಂ ಪೆಟ್ರೋಲ್ ಮೇಲಿನ ತೆರಿಗೆಯನ್ನು ಶೇ.32 ರಿಂದ ಶೇ.35ಕ್ಕೆ ಏರಿಸಿದ್ದರೆ, ಡೀಸೆಲ್ ಮೇಲಿನ ತೆರಿಗೆಯನ್ನು ಶೇ.21ರಿಂದ ಶೇ.24ಕ್ಕೆ ಏರಿಕೆ ಮಾಡಿದ್ದಾರೆ. ತೆರಿಗೆ ಹೆಚ್ಚಳದಿಂದಾಗಿ ರಾಜ್ಯದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ದರ 1.60 ರೂ. ಮತ್ತು ಪ್ರತಿ ಲೀಟರ್ ಡಿಸೇಲ್ ದರ 1.59 ರೂ. ಏರಿಕೆಯಾಗಲಿದೆ.
ಹಿಂದಿನ ಸರ್ಕಾರ ಪೆಟ್ರೋಲ್ ಮೇಲಿನ ತೆರಿಗೆಯನ್ನು ಶೇ.30ರಿಂದ 32ಕ್ಕೆ ಏರಿಕೆ ಮಾಡಿದ್ದರೆ, ಡೀಸೆಲ್ ಮೇಲಿನ ತೆರಿಗೆಯನ್ನು ಶೇ.19ರಿಂದ 21ಕ್ಕೆ ಏರಿಕೆ ಮಾಡಿದ್ದರು. ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಮಾರಾಟ ತೆರಿಗೆ ಹೆಚ್ಚಳದಿಂದ ಲೀಟರ್ ಪೆಟ್ರೋಲ್ ಬೆಲೆ 1.14 ರೂ. ಮತ್ತು ಡೀಸೆಲ್ ಬೆಲೆ 1.12 ರೂ. ರಷ್ಟು ಹೆಚ್ಚಳವಾಗಿತ್ತು.