ಡಿವಿಜಿ ಸುದ್ದಿ, ಹಾಸನ: ಮುಂದಿನ ನಾಲ್ಕು ದಿನಗಳಲ್ಲಿ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಿ ಸಂಪುಟ ವಿಸ್ತರಣೆ ಬಗ್ಗೆ ತೀರ್ಮಾನಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್ . ಯಡಿಯೂರಪ್ಪ ಹೇಳಿದರು.
ಪುಷ್ಪಗಿರಿ ರಾಷ್ಟ್ರೀಯ ಉತ್ಸವ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಹಳೇಬೀಡಿನಲ್ಲಿ ಮಾತನಾಡಿದ ಅವರು, ಸಂಪುಟ ವಿಸ್ತಣೆ ಬಗ್ಗೆ ಪ್ರಧಾನಿ ಅವರ ಜೊತೆ ಚರ್ಚಿಸಿ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದರು.
ಧಾರ್ಮಿಕ ಸಂಸ್ಥೆಗಳು ಸಮಾಜದ ಬೆಳವಣಿಗೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ಬಂದಿವೆ. ಪುಷ್ಪಗಿರಿ ಮಠಕ್ಕೆ ಮೊದಲ ಕಂತಾಗಿ 5 ಕೋಟಿ ಹಣ ಬಿಡುಗಡೆ ಮಾಡುತ್ತೇನೆ. ರಣಘಟ್ಟ ಏತ ನೀರಾವರಿಗೆ ರೂಪುರೇಷೆ ಸಿದ್ದಪಡಿಸಲಾಗಿದೆ. ರಣಘಟ್ಟ ಯೋಜನೆಗೆ 125 ಕೋಟಿ ಅನುದಾನ ಬಿಡುಗಡೆ ಮಾಡುತ್ತೇನೆ. ರಾಜ್ಯದ ಎಲ್ಲಾ ಕೆರೆ ಕಟ್ಟೆಗಳನ್ನ ತುಂಬಿಸಲು ಮೊದಲ ಆದ್ಯತೆ ನೀಡಲಿದೆ. ಪ್ರವಾಸೋದ್ಯಕ್ಕೆ ಪ್ರಾಮೂಖ್ಯತೆ ಕೊಟ್ಟು ಬೇಲೂರು, ಹಳೇಬೀಡಿಗೆ ಹೆಚ್ಚಿನ ಸಂಖ್ಯೆಯ ಪ್ರವಾಸಿಗರು ಆಗಮಿಸುವಂತೆ ಆಕರ್ಷಿಸಲಾಗುವುದು ಎಂದರು.