ಡಿವಿಜಿ ಸುದ್ದಿ, ಬೆಂಗಳೂರು: ರಾಜ್ಯದ ಒಳನಾಡಿನಲ್ಲಿ ನೈರುತ್ಯ ಮುಂಗಾರು ಚುರುಕಾಗಿದ್ದು, ಕರಾವಳಿ ಹಾಗೂ ಉತ್ತರ ಒಳನಾಡಿನ 11 ಜಿಲ್ಲೆಯಲ್ಲಿ ಇಂದು ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಉತ್ತರ ಒಳನಾಡಿನ ಬೆಳಗಾವಿ, ಬೀದರ್, ಧಾರವಾಡ, ಕಲಬುರ್ಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಹಾಗೂ ಕರಾವಳಿಯ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗಲಿದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ರಾಜ್ಯದ ಒಳನಾಡಿನಲ್ಲಿ ಮುಂಗಾರು ಚುರುಕಾಗಿದೆ. ಇದರ ಪರಿಣಾಮ ಉತ್ತರ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಇನ್ನೆರಡು ದಿನಗಳವರೆಗೆ ಭಾರಿ ಮಳೆಯಾಗಿದೆ. ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿಯೂ ಭಾರೀ ಮಳಎಂದು ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್.ಪಾಟೀಲ ಮಾಹಿತಿ ನೀಡಿದ್ದಾರೆ.