ಡಿವಿಜಿ ಸುದ್ದಿ, ಬೆಂಗಳೂರು: ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ 15 ಜಿಲ್ಲೆಯಲ್ಲಿ ಯೆಲ್ಲೊ ಆಲರ್ಟ್ ಘೋಷಣೆ ಮಾಡಲಾಗಿದೆ. ಈ ಜಿಲ್ಲೆಗಳಲ್ಲಿ ಗುಡುಗು, ಸಿಡಿಲು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ ಹಾಗೂ ತುಮಕೂರು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ನಿರೀಕ್ಷೆಯಿದೆ.
ಕರಾವಳಿ ಯಲ್ಲಿ ಮೀನುಗಾರರು ಕಡಲಿಗೆ ಇಳಿಯದಂತೆ ಇಲಾಖೆ ಎಚ್ಚರಿಕೆ ನೀಡಲಾಗಿದೆ. ಉತ್ತರ ಒಳನಾಡಿನಲ್ಲಿ ಎರಡು ದಿನದ ಮಳೆ ಪ್ರಮಾಣ ಕಡಿಮೆ ಇರಲಿದೆ.



