Connect with us

Dvgsuddi Kannada | online news portal | Kannada news online

ಇಂದಿನಿಂದ ರಾಜ್ಯದ ದಕ್ಷಿಣ, ಕರಾವಳಿ ಒಳನಾಡಿನಲ್ಲಿ ಮೂರು ದಿನ ಭಾರೀ ಮಳೆ

ಪ್ರಮುಖ ಸುದ್ದಿ

ಇಂದಿನಿಂದ ರಾಜ್ಯದ ದಕ್ಷಿಣ, ಕರಾವಳಿ ಒಳನಾಡಿನಲ್ಲಿ ಮೂರು ದಿನ ಭಾರೀ ಮಳೆ

ಡಿವಿಜಿ ಸುದ್ದಿ,ಬೆಂಗಳೂರು: ಅರಬ್ಬಿ ಸಮುದ್ರ ಹಾಗೂ ಬಂಗಾಳ ಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿದ್ದು, ರಾಜ್ಯದ ದಕ್ಷಿಣ ಒಳನಾಡು ಹಾಗೂ ಕರಾವಳಿ ಭಾಗದಲ್ಲಿ ಇಂದಿನಿಂದ ಮೂರು ದಿನಗಳವರೆಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಅದರಲ್ಲೂ ದಕ್ಷಿಣ ಒಳನಾಡಿನ ಚಿಕ್ಕಮಗಳೂರು ಹಾಗೂ ಹಾಸನದಲ್ಲಿ ಹೆಚ್ಚು ಮಳೆಯಾಗಲಿದ್ದು, ಯೆಲ್ಲೊ ಅಲರ್ಟ್ ಘೋಷಿಸಲಾಗಿದೆ. ಮೇ 27ರಂದು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಮಂಡ್ಯ, ಮೈಸೂರು, ರಾಮನಗರದಲ್ಲಿ ಭಾರಿ ಮಳೆಯಾಗಲಿದೆ.

ಇನ್ನು 28ರಂದು ಚಾಮರಾಜನಗರ, ಮೈಸೂರು, ರಾಮನಗರ, ತುಮಕೂರು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಲಿರುವ ಹಿನ್ನೆಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಿದೆ.

ರಾಜ್ಯಕ್ಕೆ ವಾರದಲ್ಲಿ ರಾಜ್ಯಕ್ಕೆ ನೈರುತ್ಯ ಮುಂಗಾರು ಮಳೆ  ಪ್ರವೇಶಿಸುವ ಸಾಧ್ಯತೆ ಇದೆ. ಅಲ್ಲಿವರೆಗೆ ಮುಂಗಾರು ಪೂರ್ವ ಮಳೆ ಸುರಿಯಲಿದೆ ಎಂದು ಕರ್ನಾಟಕ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಮಾಹಿತಿ ನೀಡಿದೆ.

ರಾಜ್ಯದಲ್ಲಿ ಬಿಸಿಲಿನ ತಾಪಮಾನ ಏರಿಕೆಯಾಗಿದ್ದು, ಕಲಬುರ್ಗಿಯಲ್ಲಿ 44.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ಹಾಗೂ ಮಡಿಕೇರಿಯಲ್ಲಿ 28 ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ ದಾಖಲಾಗಿದೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top