Connect with us

Dvgsuddi Kannada | online news portal | Kannada news online

ಬಾರ್ ಮಾಲೀಕರಿಗೆ ಬಿಗ್ ಶಾಕ್;  ದಾಸ್ತಾನು ಪರಿಶೀಲನೆಯಲ್ಲಿ  ವ್ಯತ್ಯಾಸ ಕಂಡುಬಂದರೆ ಕ್ರಿಮಿನಲ್‌ ಕೇಸ್

ಪ್ರಮುಖ ಸುದ್ದಿ

ಬಾರ್ ಮಾಲೀಕರಿಗೆ ಬಿಗ್ ಶಾಕ್;  ದಾಸ್ತಾನು ಪರಿಶೀಲನೆಯಲ್ಲಿ  ವ್ಯತ್ಯಾಸ ಕಂಡುಬಂದರೆ ಕ್ರಿಮಿನಲ್‌ ಕೇಸ್

ಡಿವಿಜಿ ಸುದ್ದಿ, ಕೋಲಾರ: ಲಾಕ್ ಡೌನ್ ಮುಗಿದ ಮೇಲೆ ಬಾರ್ ಮಾಲೀಕರಿಗೆ  ಬಿಗ್ ಶಾಕ್ ನೀಡಲಿದೆ ಸರ್ಕಾರ.  ಬಾರ್ ನಲ್ಲಿ ಕಳ್ಳತನವಾಗಿದೆ ಎಂದು ಸುಳ್ಳು ಹೇಳಿ ಅಕ್ರಮ ಮದ್ಯ ಮಾರಾಟ ಮಾಡಿದವರ ಮೇಲೆ ಪರಿಶೀಲನೆ ವೇಳೆ ದಾಸ್ತಾನಿನಲ್ಲಿ ವ್ಯತ್ಯಾಸ ಕಂಡು ಬಂದಲ್ಲಿ  ಕ್ರಿಮಿನಲ್ ಕೇಸ್ ದಾಖಲಿಸಿ, ಪರವಾನಿಗೆ ರದ್ದು ಮಾಡಲು ಸರ್ಕಾರ ನಿರ್ಧರಿಸಿದೆ.

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅಬಕಾರಿ ಸಚಿವ ಎಚ್‌.ನಾಗೇಶ್‌, ರಾಜ್ಯದೆಲ್ಲೆಡೆ ಬಾರ್ ಗಳಲ್ಲಿ  ಮದ್ಯದ ದಾಸ್ತಾನಿನ ಪರಿಶೀಲನೆ ಮಾಡಿ ವ್ಯತ್ಯಾಸ ಕಂಡುಬಂದರೆ ಮಾಲೀಕರ ವಿರುದ್ಧ ಕ್ರಿಮಿನಲ್‌ ಪ್ರಕರಣ ದಾಖಲಿಸಿ ಪರವಾನಗಿ ರದ್ದುಪಡಿಸುತ್ತೇವೆ ಎಂದು ತಿಳಿಸಿದರು.

ಬಾರ್  ಮಾಲೀಕರೇ ಕದ್ದುಮುಚ್ಚಿ ಮದ್ಯ ಮಾರಾಟ ಮಾಡುತ್ತಿರುವ ಬಗ್ಗೆ ಸಾಕಷ್ಟು ದೂರು ಬಂದಿವೆ. ಈ ಅಕ್ರಮಕ್ಕೆ ಅಬಕಾರಿ ಇಲಾಖೆ ಅಧಿಕಾರಿಗಳು ಕುಮ್ಮಕ್ಕು ನೀಡುತ್ತಿದ್ದಾರೆ, ಹೀಗಾಗಿ ಲಾಕ್‌ಡೌನ್‌ ಜಾರಿಗೂ ಮುನ್ನ ಮದ್ಯದಂಗಡಿಗಳಲ್ಲಿದ್ದ ಮದ್ಯದ ದಾಸ್ತಾನಿನ ವಿವರವನ್ನು ದಾಖಲೆ ಪುಸ್ತಕದಲ್ಲಿ ನಮೂದು ಮಾಡಿ ಅಂಗಡಿಗಳಿಗೆ ಬೀಗಮುದ್ರೆ ಹಾಕಲಾಗಿತ್ತು.

ದಾಖಲೆ ಪುಸ್ತಕದಲ್ಲಿನ ವಿವರ ಮತ್ತು ಸದ್ಯ ದಾಸ್ತಾನಿರುವ ಮದ್ಯದ ಪ್ರಮಾಣವನ್ನು ಪರಿಶೀಲಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಮದ್ಯದ ದಾಸ್ತಾನಿನಲ್ಲಿ ವ್ಯತ್ಯಾಸ ಕಂಡುಬಂದರೆ ಮುಲಾಜಿಲ್ಲದೆ ಅಂಗಡಿಯ ಲೈಸನ್ಸ್‌ ರದ್ದು ಮಾಡುತ್ತೇವೆಂದು ಎಚ್ಚರಿಕೆ ನೀಡಿದರು.

ನನಗೆ ಕುಡುಕರ ಸಂಘದ ಅಧ್ಯಕ್ಷರೇ ಕರೆ ಮಾಡಿ ಮದ್ಯ ಆರಂಭಿಸುವಂತೆ ಒತ್ತಾಯಿಸಿದ್ದಾರೆ. ಲಾಕ್‌ಡೌನ್‌ ಕಾರಣಕ್ಕೆ ತಾತ್ಕಾಲಿಕವಾಗಿ ನಿರ್ಬಂಧಿಸಿರುವುದಾಗಿ ಅವರಿಗೆ ಮನವರಿಕೆ ಮಾಡಿಕೊಟ್ಟಿದ್ದೇನೆ. ಮೇ 3ರ ನಂತರ ಮದ್ಯ ಮಾರಾಟಕ್ಕೆ ಅನುಮತಿ ಸಿಗಲಿದೆ ಎಂದರು.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top