ಡಿವಿಜಿ ಸುದ್ದಿ, ರಾಣೆಬೆನ್ನೂರು: ರಾಣೆಬೆನ್ನೂರು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ.ಬಿ.ಕೋಳಿವಾಡ ಅವರ ಮೇಲೆ ಐಟಿ ಮತ್ತು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಮಂಗಳವಾರ ತಡರಾತ್ರಿ ದಾಳಿ ನಡೆಸಿದ್ದಾರೆ.
ರಾಣೆಬೆನ್ನೂರು ಉಪ ಚುನಾವಣೆ ಹಿನ್ನೆಲೆಯಲ್ಲಿ ಅಕ್ರಮ ಹಣ ಮತ್ತು ಮದ್ಯ ದಾಸ್ತಾನು ಇರುವ ಖಚಿತ ಮಾಹಿತಿ ಮೇರೆ ದಾಳಿ ನಡೆಸಲಾಗಿದೆ ಎಂದು ಹೇಳಲಾಗುತ್ತಿದೆ. ಸದ್ಯ ಅಧಿಕಾರಿಗಳು ಮನೆಯಲ್ಲಿ ಮಹತ್ವದ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ. ಕೋಳಿವಾಡ ಮನೆ ಮೇಲಿನ ದಾಳಿ ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು, ಅಭಿಮಾನಿಗಳು ಪ್ರತಿಭಟನೆ ನಡೆಸಿದರು. ಮನೆಗೆ ಪೊಲೀಸ್ ಬಿಗಿ ಪೊಲೀಸ್ ಬಂದೋಬಸ್ತ್ ವಿಧಿಸಲಾಗಿದೆ.
ಐಟಿ ಅಧಿಕಾರಿಗಳು ನಮ್ಮ ಮನೆಯಲ್ಲಿ ಪರಿಶೀಲನೆ ನಡೆಸಿರುವುದು ನಿಜ. ಅವರಿಗೆ ಏನೂ ಸಿಗದ ಹಿನ್ನೆಲೆ ವಾಪಸ್ ಆಗಿದ್ದಾರೆ ಎಂದು ಬಿ.ಕೆ. ಕೋಳಿವಾಡ, ಇದೊಂದು ರಾಜಕೀಯ ದುರುದ್ದೇಶದ ದಾಳಿ. ಈ ದಾಳಿಯ ಹಿಂದೆ ಬಿಜೆಪಿ ಸರ್ಕಾರ ಕೈವಾಡವಿದೆ. ಕೇಂದ್ರ ಸರ್ಕಾರ ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದರು.