ಡಿವಿಜಿ ಸುದ್ದಿ, ಬೆಂಗಳೂರು: ಕೊರೊನಾ ಭೀತಿ ಹಿನ್ನೆಲೆ ಖಾಸಗಿ ಸಿಬಿಎಸ್ ಸಿ ಶಾಲೆಗಳ ಒಕ್ಕೂಟ ಸಭೆ ಸೇರಿ 1 ರಿಂದ 5 ನೇ ತರಗತಿ ವರೆಗೆ ವಾರ್ಷಿಕ ಪರೀಕ್ಷೆ ನಡೆಸದೇ ಪಾಸ್ ಮಾಡಲು ತೀರ್ಮಾನ ಕೈಗೊಳ್ಳಲಾಗಿದೆ.
ಬೆಂಗಳೂರು, ಬೆಂಗಳೂರು ಗ್ರಾಮಾಂತರ, ರಾಮನಗರ, ಕೊಡಗು, ಮೈಸೂರು, ಹಾಸನ, ಮಂಡ್ಯ ಜಿಲ್ಲೆಯ 250 ಕ್ಕೂ ಹೆಚ್ಚು ಸಿಬಿಎಸ್ ಸಿ ಶಾಲೆಗಳು ಈ ನಿರ್ಧಾರ ಕೈಗೊಂಡಿವೆ. ರಾಜ್ಯದಲ್ಲಿ ಕೊರೊನಾ ವೈರಸ್ ಭೀತಿ ಇರುವುದರಿಂದ ಸಿಬಿಎಸ್ ಸಿ ಖಾಸಗಿ ಶಾಲೆಗಳ ಒಕ್ಕೂಟದಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ.
1 ರಿಂದ 5ನೇ ತರಗತಿ ವಿದ್ಯಾರ್ಥಿ ಇಂದಿನ ಕಿರು ಪರೀಕ್ಷೆಯಲ್ಲಿ ಗಳಿಸಿದ ಅಂಕದ ಆಧಾರದ ಮೇಲೆ ಪಾಸ್ ಮಾಡಲು ತೀರ್ಮಾನ ಕೈಗೊಳ್ಳಲಾಗಿದೆ. ಈ ಮೂಲಕ ಕೊರೊನಾ ಬೀತಿಯಿಂದ 1 ತಿಂಗಳ ಕಾಲ ಸರ್ಕಾರ ರಜೆ ಘೋಷಿಸಲಾಗಿತ್ತು. ಇದೀಗ ಖಾಸಗಿ ಶಾಲೆಗಳ ಒಕ್ಕೂಟ ಪರೀಕ್ಷೆ ನಡೆಸದಿರಲು ತೀರ್ಮಾನ ಕೈಗೊಂಡಿದೆ.



