Connect with us

Dvgsuddi Kannada | online news portal | Kannada news online

ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 13ಕ್ಕೆ ಏರಿಕೆ; ತುರ್ತು ಸಭೆ ಕರೆದ ಸಿಎಂ ಯಡಿಯೂರಪ್ಪ

ಪ್ರಮುಖ ಸುದ್ದಿ

ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 13ಕ್ಕೆ ಏರಿಕೆ; ತುರ್ತು ಸಭೆ ಕರೆದ ಸಿಎಂ ಯಡಿಯೂರಪ್ಪ

ಡಿವಿಜಿ ಸುದ್ದಿ,ಬೆಂಗಳೂರು: ಡೆಡ್ಲಿ ಕೊರೊನಾ ಭೀತಿ ರಾಜ್ಯದಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ.  ಇಡೀ ದೇಶದಲ್ಲಿಯೇ ಮೊದಲ ಬಲಿ ಪಡೆದ ಕರ್ನಾಟಕದಲ್ಲಿ, ಇದೀಗ ಸೋಂಕು ತಗುಲಿತರ ಸಂಖ್ಯೆ 13ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಇಂದು ಮತ್ತಿಬ್ಬರಿಗೆ ಕೊರೊನಾ ಸೋಂಕು ತಗಲಿರುವುದು ಧೃಡಪಟ್ಟಿದೆ ಎಂದು ಆರೋಗ್ಯ ಸಚಿವ ಶ್ರೀರಾಮುಲು ಟ್ವೀಟ್ ಮಾಡಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಕರೊನಾ ಸೋಂಕಿತರ  ಸಂಖ್ಯೆ 13 ಕ್ಕೆ ಏರಿಕೆಯಾಗಿದೆ. ಇನ್ನೊಂದೆಡೆ ರಾಜ್ಯದಲ್ಲಿ ಹಕ್ಕಿ ಜ್ವರ, ಮಂಗನ ಕಾಯಿಲೆ, ಕೊರೊನಾ ಭೀತಿ ಹೆಚ್ಚಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ವಿಧಾನ ಸೌಧದಲ್ಲಿ ತುರ್ತು ಸಭೆ ಕರೆಯಲಾಗಿದೆ.

56 ವರ್ಷದ ವ್ಯಕ್ತಿ ಅಮೆರಿಕಾದಿಂದ ಬೆಂಗಳೂರಿಗೆ ಮಾರ್ಚ್ 6 ರಂದು ಬಂದಿದ್ದು,ಅವರಲ್ಲಿ ಸೋಂಕು ಧೃಡಪಟ್ಟಿದೆ.  ಇನ್ನೊಬ್ಬ ಮಹಿಳೆ ಸ್ಪೇನ್ ದೇಶದಿಂದ ಬಂದಿದ್ದರು. ಈ ಇಬ್ಬರಲ್ಲಿಯೂ ಕೊರೊನಾ ಸೋಂಕು ತಗಲಿರುವುದು ಸಾಬೀತಾಗಿದೆ. ಹೀಗಾಗಿ ಪ್ರತ್ಯೇಕವಾಗಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಶ್ರೀರಾಮುಲು ತಿಳಿಸಿದ್ದಾರೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

Advertisement

ದಾವಣಗೆರೆ

Advertisement
To Top