ಹೈದರಾಬಾದ್: ಬಾಹುಬಲಿ ನಟ ಪ್ರಭಾಸ್ ಕೊರೊನಾ ವಿರುದ್ಧದ ಹೋರಾಟಕ್ಕೆ 4 ಕೋಟಿ ರೂಪಾಯಿ ದೇಣಿಗೆ ನೀಡಿದ್ದಾರೆ.
ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಗೆ ಪ್ರಭಾಸ್ 3 ಕೋಟಿ ಹಾಗೂ ಆಂಧ್ರಪ್ರದೇಶ ಮತ್ತು ತೆಲಂಗಾಣ ಮುಖ್ಯಮಂತ್ರಿ ಪರಿಹಾರ ನಿಧಿಗೆ ತಲಾ 50 ಲಕ್ಷ ರೂ. ದೇಣಿಗೆ ನೀಡಿದ್ದಾರೆ. ಪ್ರಭಾಸ್ ಒಟ್ಟು ನಾಲ್ಕು ಕೋಟಿ ರೂಪಾಯಿ ನೀಡಿದ್ದಾರೆ.
ಕೊರೊನಾ ಸೋಂಕು ಹರಡುವ ಹಿನ್ನೆಲೆಯಲ್ಲಿ ಲಾಕ್ ಡೌನ್ ಆಗಿದೆ. ಇಡೀ ದೇಶದ ಜನರು ಕೋವಿಡ್ ವಿರುದ್ಧ ಹೋರಾಡಲು ಒಗ್ಗಟ್ಟಾಗಿದ್ದಾರೆ. ಈ ನಡುವೆ ಪ್ರಧಾನಿ ನರೇಂದ್ರ ಮೋದಿಯಿಂದ ಹಿಡಿದು ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳು ಆರ್ಥಿಕ ಸಹಾಯ ಮಾಡುವಂತೆ ದೇಶದ ಜನರನ್ನು ಕೋರಿದ್ದಾರೆ. ಪಿಎಂ ಮತ್ತು ಸಿಎಂಗಳ ಮನವಿ ಸ್ಪಂದಿಸಿರುವ ನಟ ಪ್ರಭಾಸ್ ಸರ್ಕಾರದ ನೆರವಿಗೆ ಬಂದಿದ್ದಾರೆ.
ನಟ ಪವನ್ ಕಲ್ಯಾಣ ಎರಡು ಕೋಟಿ ಆರ್ಥಿಕ ನೆರವು ನೀಡಿದ್ದರು. ಟಾಲಿವುಡ್‍ನ ಮತ್ತೋರ್ವ ನಟ ಮಹೇಶ್ ಬಾಬು ಆಂಧ್ರ ಪ್ರದೇಶ ಮತ್ತು ತೆಲಂಗಾಣ ಮುಖ್ಯಮಂತ್ರಿ ಪರಿಹಾರ ನಿಧಿಗೆ ಒಂದು ಕೋಟಿ ನೀಡಿ ಸಹಾಯ ಹಸ್ತ ಚಾಚಿದ್ದರು. ನಟ ರಾಮ್‍ಚರಣ್ 70 ಲಕ್ಷ ರೂ. ಆರ್ಥಿಕ ನೆರವು ನೀಡಿದ್ದಾರೆ.



