Connect with us

Dvg Suddi-Kannada News

ಕೆಪಿಸಿಸಿ ವತಿಯಿಂದ ಕೆಎಸ್ ಆರ್ ಟಿಸಿಗೆ 1 ಕೋಟಿ ದೇಣಿಗೆ

ಪ್ರಮುಖ ಸುದ್ದಿ

ಕೆಪಿಸಿಸಿ ವತಿಯಿಂದ ಕೆಎಸ್ ಆರ್ ಟಿಸಿಗೆ 1 ಕೋಟಿ ದೇಣಿಗೆ

ಡಿವಿಜಿ ಸುದ್ದಿ, ಬೆಂಗಳೂರು: ಲಾಕ್ ಡೌನ್ ಹಿನ್ನೆಲೆ ಕೂಲಿ ಕಾರ್ಮಿಕರಿಗೆ ಉಚಿತ ಬಸ್ ಸಂಚಾರ ವ್ಯವಸ್ಥೆ ಕಲ್ಪಿಸುವುದಕ್ಕಾಗಿ  ಕೆಪಿಸಿಸಿಯು  ಕೆಎಸ್‌ಆರ್‌ಟಿಸಿಗೆ 1 ಕೋಟಿ ದೇಣಿಗೆ ನೀಡಿದೆ.

ಬೆಂಗಳೂರಿನಲ್ಲಿ ನೆಲೆಸಿರುವ ಕಾರ್ಮಿಕರು ತಮ್ಮ ಊರಿಗೆ ಹೋಗಲು ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ ಜಮಾಯಿಸಿದ್ದಾರೆ. ಕಾರ್ಮಿಕರನ್ನು ಉಚಿತವಾಗಿ ಕರೆದೊಯ್ಯಲು ಕೆಪಿಸಿಸಿಯಿಂದ ಒಂದು ಕೋಟಿ ಚೆಕ್ ಅನ್ನು ಕೆಎಸ್‌ಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಎಂ ಕಳಸದ್ ಅವರಿಗೆ ಕಾಂಗ್ರೆಸ್ ರಾಜ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್ ನೀಡಿದ್ದಾರೆ. ಇದಲ್ಲದೆ ಇನ್ನೂ ಹೆಚ್ಚಿನ ಹಣ ಅವಶ್ಯಕತೆ ಇದ್ದಲ್ಲಿ ಕೆಪಿಸಿಸಿ ನೀಡಲು ಸಿದ್ಧವಿದೆ ಎಂದು ತಿಳಿಸಿದ್ದಾರೆ.

ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಮಾಜಿ ಸಚಿವ ಎಚ್.ಕೆ.ಪಾಟೀಲ್, ಪ್ರಿಯಾಂಕ್ ಖರ್ಗೆ ಸೇರಿದಂತೆ ಕಾಂಗ್ರೆಸ್ ನಿಯೋಗ ಮೆಜೆಸ್ಟಿಕ್ ಬಸ್ ನಿಲ್ದಾಣಕ್ಕೆ ಭೇಟಿ ನೀಡಿದೆ. ಈ ವೇಳೆ ಸಿದ್ದರಾಮಯ್ಯ ಅವರು ಬಸ್ ಹತ್ತಿ ಪ್ರಯಾಣಿಕರ ಸಮಸ್ಯೆಯನ್ನು ಆಲಿಸಿದರು.

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

Advertisement Enter ad code here
Advertisement

ದಾವಣಗೆರೆ

Advertisement

ಪ್ರಮುಖ ಸುದ್ದಿ

Advertisement
Advertisement e
Advertisement
To Top