ಬೆಂಗಳೂರು: ಕೊರೊನಾ ಸೋಂಕಿನಿಂದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರಿಗೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಕರೆ ಮಾಡಿ ಆರೋಗ್ಯ ವಿಚಾರಿಸಿದ್ದಾರೆ.
ಇಂದು ಬೆಳಗ್ಗೆ ಫೋನ್ ಮಾಡಿದ ಸಿಎಂ, ಶಿವಕುಮಾರ್ ಆರೋಗ್ಯ ವಿಚಾರಿಸಿದರು. ಆದಷ್ಟು ಬೇಗ ಚೇತರಿಸಿಕೊಳ್ಳುವಂತೆ ಹಾರೈಸಿದರು.
ಕೆಪಿಸಿಸಿ ಅಧ್ಯಕ್ಷರಾದ ಶ್ರೀ ಡಿಕೆ ಶಿವಕುಮಾರ್ ಅವರು ಶೀಘ್ರದಲ್ಲಿ ಕೊರೋನಾ ಸೋಂಕಿನಿಂದ ಪೂರ್ಣ ಗುಣಮುಖರಾಗಿ, ಮತ್ತೆ ಎಂದಿನಂತೆ ತಮ್ಮ ಕಾರ್ಯಕ್ಷೇತ್ರದಲ್ಲಿ ಸಕ್ರಿಯರಾಗಿ ತೊಡಗಿಕೊಳ್ಳಲಿ ಎಂದು ಹಾರೈಸುತ್ತೇನೆ.@DKShivakumar
— B.S.Yediyurappa (@BSYBJP) August 25, 2020
ನಿನ್ನೆ ಟ್ವೀಟ್ ಮೂಲಕ ಶಿವಕುಮಾರ್ ಕೊರೊನಾ ಪಾಸಿಟಿವ್ ಇರುವುದನ್ನು ತಿಳಿಸಿದ್ದರು. ಕಳೆದ ಕೆಲ ದಿನಗಳಿಂದ ಜ್ವರದಿಂದ ಬಳಲುತ್ತಿದ್ದು, ಕೊರೊನಾ ಟೆಸ್ಟ್ ಮಾಡಿದ ವೇಳೆ ವರದಿ ಪಾಸಿಟಿವ್ ಎಂದು ಬಂದಿದೆ. ಈ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದು, ಆರೋಗ್ಯವಾಗಿದ್ದೇನೆ. ನಿಮ್ಮೆಲ್ಲರ ಆಶೀವಾದದಿಂದ ಶೀಘ್ರವೇ ಗುಣಮುಖವಾಗಿ ಬರುತ್ತೇನೆ. ಅಲ್ಲದೆ ಕೆಲ ದಿನಗಳಿಂದ ನನ್ನೊಂದಿಗೆ ಸಂಪರ್ಕದಲ್ಲಿದ್ದ ಎಲ್ಲರೂ ಟೆಸ್ಟ್ ಮಾಡಿಸಿಕೊಳ್ಳಿ ಎಂದು ಮನವಿ ಮಾಡಿದ್ದರು.



