Connect with us

Dvgsuddi Kannada | online news portal | Kannada news online

ರಾಜ್ಯದಲ್ಲಿ ಇನ್ನು ನಾಲ್ಕು ದಿನ ಭಾರೀ ಮಳೆ

ಪ್ರಮುಖ ಸುದ್ದಿ

ರಾಜ್ಯದಲ್ಲಿ ಇನ್ನು ನಾಲ್ಕು ದಿನ ಭಾರೀ ಮಳೆ

ಡಿವಿಜಿ ಸುದ್ದಿ, ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಇಂದಿನಿಂದ ನಾಲ್ಕು ದಿನಗಳ ಕಾಲ ಮಳೆಯಾಗುವ ಸಾಧ್ಯತೆಯಿದೆ.

ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಜೋರು ಮಳೆಯಾಗಲಿದ್ದು, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡು ಭಾಗದಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ರಾಜ್ಯ ನೈಸರ್ಗಿಕ ಪ್ರಕೃತಿ ವಿಕೋಪ ಇಲಾಖೆ ನಿರ್ದೇಶಕ ಶ್ರೀನಿವಾಸ್ ರೆಡ್ಡಿ ಮಾಹಿತಿ ನೀಡಿದ್ದಾರೆ.

ರಾಜ್ಯದ ವಾಡಿಕೆ ಮಳೆ ಈ ಒಂದು ವಾರದಲ್ಲಿ ಬೀಳುವ ಸಾಧ್ಯತೆಯಿದೆ. ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿದಿರುವುದರಿಂದ ಕರ್ನಾಟಕ ಸೇರಿದಂತೆ ದಕ್ಷಿಣ ಭಾಗದ ರಾಜ್ಯದ ಹಲವು ಕಡೆ ಮಳೆಯಾಗಲಿದೆ ಎಂದು ಹೇಳಿದ್ದಾರೆ.

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top