Connect with us

Dvgsuddi Kannada | online news portal | Kannada news online

ವಾಯುವ್ಯ ಸಾರಿಗೆ ಸಂಸ್ಥೆಯ ಹುಬ್ಬಳ್ಳಿ ವಿಭಾಗದಿಂದ ಎಸಿ ಬಸ್ ಸಂಚಾರ ಆರಂಭ  

ಜಿಲ್ಲಾ ಸುದ್ದಿ

ವಾಯುವ್ಯ ಸಾರಿಗೆ ಸಂಸ್ಥೆಯ ಹುಬ್ಬಳ್ಳಿ ವಿಭಾಗದಿಂದ ಎಸಿ ಬಸ್ ಸಂಚಾರ ಆರಂಭ  

ಡಿವಿಜಿ ಸುದ್ದಿ, ಹುಬ್ಬಳ್ಳಿ: ಲಾಕ್‍ಡೌನ್ ಪರಿಣಾಮ ನಾಲ್ಕು ತಿಂಗಳಿಂದ ಸ್ಥಗಿತಗೊಳಿಸಲಾಗಿದ್ದ ಎಸಿ ಬಸ್‍ಗಳ ಸಂಚಾರವನ್ನು ವಾಯುವ್ಯ ಸಾರಿಗೆ ವಿಭಾಗದ ಹುಬ್ಬಳ್ಳಿ ಘಟಕ ಸೋಮವಾರದಿಂದ ಪುನರಾರಂಭಿಸಿದೆ.

ಮೊದಲ ಹಂತದಲ್ಲಿ ಹುಬ್ಬಳ್ಳಿಯಿಂದ ಬೆಂಗಳೂರು ಮತ್ತು ಮೈಸೂರಿನ ನಡುವೆ ಎಸಿ ಸ್ಲೀಪರ್ ಮತ್ತು ವೋಲ್ವೋ ಬಸ್‍ಗಳ ಸಂಚಾರ ಆರಂಭಿಸಲಾಗುತ್ತದೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ಎಚ್.ರಾಮನಗೌಡರ ಮಾಹಿತಿ ನೀಡಿದ್ದಾರೆ.

ಹುಬ್ಬಳ್ಳಿಯಿಂದ ಬೆಂಗಳೂರಿಗೆ ವೋಲ್ವೊ ಬಸ್ ಮಧ್ಯಾಹ್ನ 3 ಗಂಟೆಗೆ ಮತ್ತು ರಾತ್ರಿ 10.30ಕ್ಕೆ ಹೊರಡುತ್ತದೆ. ಎಸಿ ಸ್ಲೀಪರ್ ಬಸ್ ರಾತ್ರಿ 10.40ಕ್ಕೆ ಹೊರಡುತ್ತದೆ. ಹುಬ್ಬಳ್ಳಿಯಿಂದ ಮೈಸೂರಿಗೆ ಎಸಿ ಸ್ಲೀಪರ್ ರಾತ್ರಿ 9.45ಕ್ಕೆ ಹೊರಡುತ್ತದೆ.

ಎಸಿ ಬಸ್ ಗಳಲ್ಲದೆ, ಈಗಾಗಲೇ ಹುಬ್ಬಳ್ಳಿಯಿಂದ ಬೆಂಗಳೂರಿಗೆ ಸಂಚರಿಸುತ್ತಿರುವ ನಾನ್ ಎಸಿ ಸ್ಲೀಪರ್ ಮತ್ತು ರಾಜಹಂಸ ಬಸ್‍ಗಳು ಎಂದಿನಂತೆ ಸಂಚರಿಸಲಿವೆ. ನಾನ್ ಎಸಿ ಸ್ಲೀಪರ್: ರಾತ್ರಿ 8.30, 9 ಹಾಗೂ 10 ಗಂಟೆ ರಾಜಹಂಸ ಸಂಜೆ 7.30 ಗಂಟೆ ಹೊರಡಲಿದೆ.

ಸರ್ಕಾರದ ಮಾರ್ಗ ಸೂಸಿ ಹಾಗೂ ಎಲ್ಲ ಸುರಕ್ಷತಾ ಕ್ರಮಗಳೊಂದಿಗೆ ಬಸ್‍ಗಳನ್ನು ರಸ್ತೆಗಿಳಿಸಲಾಗುತ್ತದೆ. ಬಸ್ ಒಳಗಡೆ ನಿಗದಿತ ತಾಪಮಾನವನ್ನು ನಿರ್ವಹಣೆ ಮಾಡಲಾಗುತ್ತದೆ. ಪ್ರಯಾಣಿಕರು ಮಾಸ್ಕ್ ಧರಿಸುವುದು ಕಡ್ಡಾಯ. ಸಾಮಾಜಿಕ ಅಂತರ ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಸ್ಲೀಪರ್ ಬಸ್ಸಿನಲ್ಲಿ 20 ಹಾಗೂ ವೋಲ್ವೋ ಬಸ್ಸಿನಲ್ಲಿ 30 ಪ್ರಯಾಣಿಕರಿಗೆ ಮಾತ್ರ ಅವಕಾಶ ಕಲ್ಪಿಸಲಾಗುವುದು. ಸುರಕ್ಷತೆಯ ದೃಷ್ಟಿಯಿಂದ ಬಸ್ಸಿನಲ್ಲಿ ಪ್ರಯಾಣಿಕರಿಗೆ ಬ್ಲಾಂಕೆಟ್ ಗಳನ್ನು ನೀಡುವುದಿಲ್ಲ ಎಂದು ತಿಳಿಸಿದ್ದಾರೆ.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಡಿಜಿಟಲ್ ಮಾಧ್ಯಮ ಅತೀ ವೇಗವಾಗಿ ಜನರನ್ನು ತಲುಪುವ ನ್ಯೂ ಮೀಡಿಯಾ. ಡಿವಿಜಿಸುದ್ದಿ‌.ಕಾಂ ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. 10 ವರ್ಷದ ಅನುಭವದೊಂದಿಗೆ ಹೊಸತನಕ್ಕೆ ಕೈ ಹಾಕಿದ್ದೇವೆ. ಉಪಯುಕ್ತ ಮಾಹಿತಿ, ಸಲಹೆ, ಸೂಚನೆ ನೀಡುವವರು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಜಿಲ್ಲಾ ಸುದ್ದಿ

To Top