ಡಿವಿಜಿ ಸುದ್ದಿ, ಬೆಂಗಳೂರು: ರಾಜ್ಯ ಸರ್ಕಾರ ಪ್ರಯಾಣಿಕರಿಗೆ ಬಿಗ್ ಶಾಕ್ ನೀಡಿದ್ದು ಕೆಎಸ್‌ಆರ್‌ಟಿಸಿ, ವಾಯುವ್ಯ ಮತ್ತು ಈಶಾನ್ಯ ರಸ್ತೆ ಸಾರಿಗೆ ಸಂಸ್ಥೆಗಳ ಬಸ್ ಪ್ರಯಾಣ ದರವನ್ನು ಶೇ.12ರಷ್ಟು ಹೆಚ್ಚಿಸಿ ಆದೇಶ ಹೊರಡಿಸಿದೆ. ನೂತನ ದರ ಮಧ್ಯ ರಾತ್ರಿಯಿಂದಲೇ ಜಾರಿಗೆ ಬರಲಿದೆ.
ಬಸ್ ಪ್ರಯಾಣ ದರ ಏರಿಕೆ ಮಧ್ಯರಾತ್ರಿಯಿಂದಲೇ ಅನ್ವಯವಾಗುವಂತೆ ಜಾರಿಯಾಗಲಿದೆ. ಶೇ. 18 ರಷ್ಟು ಬಸ್ ದರ ಏರಿಕೆ ಮಾಡುವಂತೆ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿತ್ತು. ಆದರೆ, ರಾಜ್ಯ ಸರ್ಕಾರ ಶೇ. 12 ರಷ್ಟು ದರ ಏರಿಕೆ ಮಾಡಿ ಆದೇಶ ಹೊರಡಿಸಿದೆ. ಬಿಎಂಟಿಸಿ ಬಸ್ ಪ್ರಯಾಣ ದರ ಹೆಚ್ಚಳ ಮಾಡಿಲ್ಲ.




