Connect with us

Dvg Suddi-Kannada News

ಸರ್ಕಾರಿ ನೌಕರನ್ನಾಗಿ ಪರಿಗಣಿಸುವಂತೆ ಆಗ್ರಹಿಸಿ ಸಾರಿಗೆ ನೌಕರರ ಪ್ರತಿಭಟನೆ

ಪ್ರಮುಖ ಸುದ್ದಿ

ಸರ್ಕಾರಿ ನೌಕರನ್ನಾಗಿ ಪರಿಗಣಿಸುವಂತೆ ಆಗ್ರಹಿಸಿ ಸಾರಿಗೆ ನೌಕರರ ಪ್ರತಿಭಟನೆ

 ಡಿವಿಜಿ ಸುದ್ದಿ , ಬೆಂಗಳೂರು: ಸರ್ಕಾರಿ ನೌಕರರನ್ನಾಗಿ ಪರಿಗಣಿಸಬೇಕೆಂದು ಒತ್ತಾಯಿಸಿ ಕೆಎಸ್‌ಆರ್‌ಟಿಸಿ, ಬಿಎಂಟಿಸಿ, ಈಶಾನ್ಯ ಮತ್ತು ವಾಯವ್ಯ ಸಾರಿಗೆ ಸಂಸ್ಥೆಗಳ ಸಿಬ್ಬಂದಿ ನಗರದ ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.

ಬೆಳಗ್ಗೆ 9 ಗಂಟೆಯಿಂದ  ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ. ಇದಕ್ಕೂ ಮುನ್ನ ರೈಲು ನಿಲ್ದಾಣದಿಂದ ಸ್ವಾತಂತ್ರ್ಯ ಉದ್ಯಾನದವರೆಗೂ ಕಾಲ್ನಡಿಗೆ ಜಾಥ ನಡೆಸಿದರು. ಈ ವೇಳೆ ಬೇಡಿಕೆ ಈಡೇರಿಕೆಗಾಗಿ ಸರ್ಕಾರವನ್ನು ಒತ್ತಾಯಿಸಿದರು.  ಈ ಪ್ರತಿಭಟನೆಯಲ್ಲಿ ಸಾರಿಗೆ ಸಂಸ್ಥೆಗಳ ಸಿಬ್ಬಂದಿಗಳ ಜೊತೆ  ಅವರ ಕುಟುಂಬ ಸದಸ್ಯರು ಭಾಗವಹಿಸಿದ್ದಾರೆ. ಸಿಬ್ಬಂದಿಗಳ ಸತ್ಯಾಗ್ರಹದಿಂದ ಬಸ್‌ಗಳ ಸಂಚಾರದಲ್ಲಿ ಯಾವುದೇ ವ್ಯತ್ಯಯ ಉಂಟಾಗಿಲ್ಲ .

ಸಂಜೆ ವರೆಗೂ ಸತ್ಯಾಗ್ರಹ ನಡೆಯಲಿದ್ದು, ವಿವಿಧ ಡಿಪೋಗಳಿಂದ ಸಾವಿರಾರು ನೌಕರರು ಸತ್ಯಾಗ್ರಹದಲ್ಲಿ  ಭಾಗವಹಿಸಿದ್ದಾರೆ . ಪ್ರತಿಭಟನೆಗೆ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

Advertisement Enter ad code here
Advertisement

ದಾವಣಗೆರೆ

Advertisement

ಪ್ರಮುಖ ಸುದ್ದಿ

News

Advertisement
Advertisement e

namma davanagere

ಸಿದ್ದನೂರು ಮತ್ತು ಅಗಸನಕಟ್ಟೆಯ ನಿಕ್ರಾ ಯೋಜನೆಯ ದೃಶ್ಯಾವಳಿ

Advertisement
To Top