Connect with us

Dvg Suddi-Kannada News

ಪ್ರಯಾಣಿಕರಿಗೆ ಸಿಹಿ ಸುದ್ದಿ: ಇಂದಿನಿಂದ ಮೂರು ದಿನ ಕೆಎಸ್ ಆರ್ ಟಿ ಬಸ್ ನಲ್ಲಿ ಉಚಿತ ಓಡಾಟಕ್ಕೆ ಅವಕಾಶ; ರಾಜ್ಯ ಸರ್ಕಾರ ಘೋಷಣೆ

ಪ್ರಮುಖ ಸುದ್ದಿ

ಪ್ರಯಾಣಿಕರಿಗೆ ಸಿಹಿ ಸುದ್ದಿ: ಇಂದಿನಿಂದ ಮೂರು ದಿನ ಕೆಎಸ್ ಆರ್ ಟಿ ಬಸ್ ನಲ್ಲಿ ಉಚಿತ ಓಡಾಟಕ್ಕೆ ಅವಕಾಶ; ರಾಜ್ಯ ಸರ್ಕಾರ ಘೋಷಣೆ

ಡಿವಿಜಿ ಸುದ್ದಿ, ಬೆಂಗಳೂರು: ಲಾಕ್ ಡೌನ್ ಪರಿಣಾಮ ತಮ್ಮ ತಮ್ಮ ಊರಿಗಳಿಗೆ ಹೋಗುತ್ತಿದ್ದ ಬಡವರು, ವಲಸೆ ಕಾರ್ಮಿಕರಿಗೆ ಸರ್ಕಾರ ಈಗ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಿದೆ.‌ ಇಂದಿನಿಂದ ಮೂರು ಬೆಂಗಳೂರಿನಿಂದಹೊರಡುವ ಎಲ್ಲ ಪ್ರಯಾಣಿಕರಿಗೂ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಿ ಆದೇಶ ಹೊರಡಿಸಿದೆ.

ಕೆಎಸ್‌ಆರ್‌ಟಿಸಿ ಶನಿವಾರ ಕಾರ್ಮಿಕರಿಂದ ದುಪ್ಪಟ್ಟು ಹಣವನ್ನು ಪಡೆಯುತ್ತಿತ್ತು. ಇದಕ್ಕೆ ಸಾರ್ವಜನಿಕರು ತೀವ್ರ ವಿರೋಧ ವ್ಯಕ್ತಪಡಿಸಿದ ಹಿನ್ನೆಲೆ ರಾಜ್ಯ ಸರ್ಕಾರ ನಿನ್ನೆ ಒನ್ ವೇ ದರ ಮಾತ್ರ ನೀಡುವಂತೆ ಆದೇಶಿಸಿತ್ತು. ಆದರೆ, ಇಂದು ರಾಜ್ಯ ಸರ್ಕಾರ ಎಲ್ಲಾ  ಕಾರ್ಮಿಕರು , ಬಡವರಿಗೆ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಿದೆ.

ಇದರಿಂದ  ಎಚ್ಚೆತ್ತುಕೊಂಡಿದ್ದ ರಾಜ್ಯ ಸರ್ಕಾರ ಹಳೇ ದರವನ್ನು ಪಡೆಯುವಂತೆ ಸೂಚನೆ ನೀಡಿತ್ತು. ಈ ಬೆನ್ನಲ್ಲೇ ಸರ್ಕಾರ ಇಂದು ಪ್ರಯಾಣಿಕರ ಬಳಿಯಿಂದ ಯಾವುದೇ ಹಣವನ್ನು ಪಡೆಯುವುದಿಲ್ಲ ಎಂದು ತಿಳಿಸಿದೆ.

ಈ ಕುರಿತು ಪ್ರತಿಕ್ರಿಯೆ ನೀಡಿದ ಕೆಎಸ್‌ಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಎಂ ಕಳಸದ್, ಸಾರಿಗೆ ನಿಗಮದಿಂದ ಕಾರ್ಮಿಕರಿಗೆ ಇಂದಿನಿಂದ 3 ದಿನ, ಮಂಗಳವಾರದವರೆಗೆ ಮೂರು ದಿನಗಳ ಕಾಲ ಉಚಿತ ಬಸ್ ಪ್ರಯಾಣಕ್ಕೆ ಅವಕಾಶ ನೀಡಲಾಗಿದೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ರಾಜ್ಯ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯ್‍ಭಾಸ್ಕರ್ ಅವರ ನಿರ್ದೇಶನದ ಮೇರೆಗೆ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

ಬಸ್‍ಗಳಲ್ಲಿ ಸಂಚರಿಸುವ ಎಲ್ಲರೂ ಕಾರ್ಮಿಕರೆಂದು ನಾವು ಭಾವಿಸಿದ್ದೇವೆ. ಕಾರ್ಮಿಕರು ಯಾವುದೇ ಆತಂಕವಿಲ್ಲದೆ ಸುಖಕರವಾಗಿ ಪ್ರಯಾಣಿಸಬಹುದು. ಈಗಾಗಲೇ ಹಣ ಪಾವತಿಸಿ ಪ್ರಯಾಣಿಸುತ್ತಿರುವ ಕಾರ್ಮಿಕರಿಗೆ ಹಣ ಮರುಪಾವತಿ ಮಾಡಲಾಗುತ್ತದೆ ಎಂದು ಕಳಸದ್ ತಿಳಿಸಿದರು.

ಕಾರ್ಮಿಕರು ಮತ್ತು ಬಡ ಕೂಲಿ ಕಾರ್ಮಿಕರ ಪರಿಸ್ಥಿತಿಯನ್ನು ಗಮನಿಸಿ ಇಂದಿನಿಂದ 3 ದಿನಗಳವರೆಗೆ ಜಿಲ್ಲಾ ಕೇಂದ್ರಗಳಿಂದ ಮತ್ತು ರಾಜಧಾನಿ ಬೆಂಗಳೂರಿನಿಂದ ಕರ್ನಾಟಕದಲ್ಲಿನ ತಮ್ಮ ತಮ್ಮ ಊರುಗಳಿಗೆ ಹೋಗುವ ಎಲ್ಲರಿಗೂ ಉಚಿತವಾಗಿ ಕೆಎಸ್‌ಆರ್‌ಟಿಸಿ ಬಸ್‍ಗಳಲ್ಲಿ ತೆರಳಲು ಅನುವು ಮಾಡಿಕೊಡಲಾಗಿದೆ. ಇದರ ವೆಚ್ಚವನ್ನು ಸರ್ಕಾರವೇ ಭರಿಸಲಿದೆ. ನನ್ನ ಕಳಕಳಿಯ ಮನವಿ ಯಾವುದೇ ಬಸ್ ನಿಲ್ದಾಣಗಳಲ್ಲಿ ಯಾರು ನೂಕುನುಗ್ಗಲು ಮಾಡಬಾರದು. ಜನರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಸಿಎಂ ಯಡಿಯೂರಪ್ಪ ಅವರು ಮನವಿ ಮಾಡಿಕೊಂಡಿದ್ದಾರೆ.

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

Advertisement Enter ad code here
Advertisement

ದಾವಣಗೆರೆ

Advertisement

ಪ್ರಮುಖ ಸುದ್ದಿ

News

Advertisement
Advertisement e

ಸಿದ್ದನೂರು ಮತ್ತು ಅಗಸನಕಟ್ಟೆಯ ನಿಕ್ರಾ ಯೋಜನೆಯ ದೃಶ್ಯಾವಳಿ

Advertisement
To Top