Connect with us

Dvg Suddi-Kannada News

ರಾಜ್ಯದಲ್ಲಿ ಮೇ .3 ವರೆಗೆ ಲಾಕ್ ಡೌನ್ ಮುಂದುವರಿಕೆ; ನಿಯಮ ಉಲ್ಲಂಘಿಸಿದ್ರೆ ಕಠಿಣ ಕ್ರಮ

ಪ್ರಮುಖ ಸುದ್ದಿ

ರಾಜ್ಯದಲ್ಲಿ ಮೇ .3 ವರೆಗೆ ಲಾಕ್ ಡೌನ್ ಮುಂದುವರಿಕೆ; ನಿಯಮ ಉಲ್ಲಂಘಿಸಿದ್ರೆ ಕಠಿಣ ಕ್ರಮ

ಡಿವಿಜಿ ಸುದ್ದಿ, ಬೆಂಗಳೂರುರಾಜ್ಯದಲ್ಲಿ ಲಾಕ್‌ಡೌನ್‌ ಅನ್ನು ಮೇ 3 ರ ವರೆಗೆ ವಿಸ್ತರಣೆ ಮಾಡಿ ರಾಜ್ಯ ಸರ್ಕಾರ ನಿರ್ಧಾರ ಕೈಗೊಂಡಿದೆ.

ಇಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದದೆ. ಈ ಮೂಲಕ ಏ. 21 ನಂತರ ಲಾಕ್ ಡೌನ್ ಸಡಿಲಗೊಳಿಸಲಾಗುತ್ತದೆ ಎನ್ನುವ ವದಂತಿಗೆ ಬ್ರೇಕ್ ಬಿದ್ದಿದೆ. ಇದರೊಂದಿಗೆ ಕೇಂದ್ರ ಸರ್ಕಾರ ಘೋಷಿಸಿದಂತೆ ಮೇ. 3 ವರೆಗೆ ರಾಜ್ಯದಲ್ಲಿ ಲಾಕ್ ಡೌನ್ ಮುಂದುವರಿಯಲಿದೆ.

ಮುಖ್ಯಮಂತ್ರಿ ಯಡಿಯೂರಪ್ಪ ಅವರು, ಲಾಕ್ ಡೌನ್ ಸಡಿಲಗೊಳಿಸಿ, ಬೈಕ್ ಸವಾರಿಗೆ, ಅಗತ್ಯ ವಸ್ತು ವಾಹನ ಓಡಾಟಕ್ಕೆ ಅವಕಾಶ ಕಲ್ಪಿಸುವುದಾಗಿ  ಶನಿವಾರ ಆದೇಶ ಹೊರಡಿಸಿದ್ದರು. ಈ ಬಗ್ಗೆ ಸಾರ್ವಜನಿಕರಿಂದ ತೀವ್ರ ವಿರೋಧ ವ್ಯಕ್ತವಾಗಿದ್ದರಿಂದ ಮತ್ತೆ ಆದೇಶ ವಾಪಸ್ಸು ತಗೆದುಕೊಳ್ಲಲಾಗಿತ್ತು.ಇದೀಗ ಮತ್ತೆ ಮೇ.3 ವರೆಗೆ ಲಾಕ್ ಡೌನ್ ಯಥಾ ಸ್ಥಿತಿ ಮುಂದುವರಿಯಲಿದೆ ಎಂದು ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.

ಸಭೆಯ ಕೈಗೊಂಡ ಪ್ರಮುಖಾಂಶಗಳು

  • ರಾಜ್ಯದಲ್ಲಿ ಮೇ 3 ರ ವರೆಗೂ ಲಾಕ್ ಡೌನ್ ಯಥಾಸ್ಥಿತಿ
  • ಅಗತ್ಯ ಸೇವೆಯಲ್ಲಿರುವವರು ಸಹಕರಿಸದೇ ಹೋದರೆ  ಶಿಕ್ಷಾರ್ಹ ಅಪರಾಧ
  • ಲಾಕ್ ಡೌನ್ ನಿಯಮ ಉಲ್ಲಂಘಿಸಿದರೆ ಕಟ್ಟುನಿಟ್ಟಿನ ಕ್ರಮ
  • ಲಾಕ್ ಡೌನ್ ಮುಂದುವರಿಸುವ ಬಗ್ಗೆ ಸಂಪುಟ ಸಭೆಯಲ್ಲಿ ಸಲಹೆ

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

Advertisement Enter ad code here
Advertisement

ದಾವಣಗೆರೆ

Advertisement

ಪ್ರಮುಖ ಸುದ್ದಿ

News

Advertisement
Advertisement e

namma davanagere

ಸಿದ್ದನೂರು ಮತ್ತು ಅಗಸನಕಟ್ಟೆಯ ನಿಕ್ರಾ ಯೋಜನೆಯ ದೃಶ್ಯಾವಳಿ

Advertisement
To Top