ಡಿವಿಜಿ ಸುದ್ದಿ, ಬೆಂಗಳೂರು: ಏಪ್ರಿಲ್ 14ರ ನಂತರ ಮದ್ಯ ಮಾರಾಟಕ್ಕೆ ಅವಕಾಶ ಕಲ್ಪಿಸುವ ಸಾಧ್ಯತೆ ಇದ್ದು, ಮದ್ಯ ಪ್ರಿಯರಿಗೆ ಸಿಗುವ ಸಿಹಿ ಸುದ್ದಿ ಸಿಗುವ ಸಾಧ್ಯತೆ ಇದೆ.
ಏಪ್ರಿಲ್ 30ರವರೆಗೆ ಲಾಕ್ಡೌನ್ ವಿಸ್ತರಿಸುವ ಕುರಿತು ಕರೆಯಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಯಡಿಯೂರಪ್ಪ, ಇನ್ನೆರಡು ದಿನದಲ್ಲಿ ದಿನದಲ್ಲಿ ಮದ್ಯ ಮಾರಾಟ ಬಗ್ಗೆ ನಿರ್ಧಾರವಾಗಲಿದೆ. ಪ್ರಧಾನಿ ಮೋದಿ ಮಾರ್ಗಸೂಚಿ ಬಳಿಕ ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದರು.
ಬಾರ್ಗಳಿಗೆ ಮದ್ಯ ಮಾರಾಟಕ್ಕೆ ಅವಕಾಶ ನೀಡದೆ ಎಂಎಸ್ಐಎಲ್ ಮೂಲಕ ಮದ್ಯ ಮಾರಾಟಕ್ಕೆ ಚಿಂತನೆ ನಡೆದಿದೆ ಎನ್ನಲಾಗುತ್ತಿದೆ. ಇನ್ನು ಎರಡು ದಿನಗಳಲ್ಲಿ ಈ ಬಗ್ಗೆ ಸರ್ಕಾರದಿಂದ ಸ್ಪಷ್ಟವಾದ ನಿರ್ಧಾರ ಪ್ರಕಟವಾಗಲಿದೆ.
ರಾಜ್ಯದಲ್ಲಿ ಮದ್ಯ ಸಿಗದೇ ಹಲವು ಮಂದಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಅಷ್ಟೇ ಅಲ್ಲದೇ ಖಿನ್ನತೆಗೆ ಒಳಗಾಗಿ ಮಾನಸಿಕವಾಗಿ ಕುಗುತ್ತಿದ್ದಾರೆ. ಅಕ್ರಮವಾಗಿ ದುಬಾರಿ ಬೆಲೆಗೆ ಮದ್ಯವನ್ನು ಮಾರಾಟ ಮಾಡುತ್ತಿದ್ದರನ್ನು ಪೊಲೀಸರು ಬಂಧಿಸಿದ್ದಾರೆ. ಇನ್ನು ಕೆಲವು ಕಡೆ ಮದ್ಯದ ಅಂಗಡಿಯಲ್ಲಿ ಕಳ್ಳತನವಾಗಿವೆ.