ಡಿವಿಜಿ ಸುದ್ದಿ, ಬೆಂಗಳೂರು: ಅಸಂಘಟಿತ ವಲಯಕ್ಕೆ ಪ್ಯಾಕೇಜ್ ಘೋಷಣೆ ಮಾಡಿದಂತೆ ಖಾಸಗಿ ಅನುದಾನರಹಿತ ಶಿಕ್ಷಣ ಸಂಸ್ಥೆಗಳ ಶಿಕ್ಷಕರಿಗೂ ಸರ್ಕಾರ ಆರ್ಥಿಕ ನೆರವು ನೀಡಬೇಕು ಎಂದು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಒತ್ತಾಯಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ಈ ಕೂಡಲೇ 1,300 ಕೋಟಿ ಆರ್ ಟಿಇ ಬಾಕಿ ಬಿಡುಗಡೆ ಮಾಡಬೇಕು. ಉತ್ತಮ ಗುಣಮಟ್ಟದ ಶಿಕ್ಷಣ ನೀಡಲು ಶ್ರಮಿಸುತ್ತಿರುವ ಶಿಕ್ಷಕರಿಗೆ ಆರ್ಥಿಕ ನೆರವು ನೀಡಬೇಕು. ಲಾಕ್‌ಡೌನ್ ನಿಂದ ಶಿಕ್ಷಣ ಸಂಸ್ಥೆಗಳು ಆರ್ಥಿಕ ನಷ್ಟ ಅನುಭವಿಸುತ್ತಿದ್ದು, ಶಿಕ್ಷಕರಿಗೆ ಸಂಬಳ ನೀಡಲು ಹಣವಿಲ್ಲ. ಹೀಗಾಗಿ ಆರ್‌ಟಿಇ ಬಾಕಿಯನ್ನು ಕೂಡಲೇ ಪಾವತಿಸಬೇಕು ಎಂದಿದ್ದಾರೆ.
ಅಸಂಘಟಿತ ವಲಯಕ್ಕೆ ಪ್ಯಾಕೇಜ್ ಘೋಷಣೆ ಮಾಡಿದಂತೆ ಖಾಸಗಿ ಅನುದಾನರಹಿತ ಶಿಕ್ಷಣ ಸಂಸ್ಥೆಗಳ ಶಿಕ್ಷಕರಿಗೂ ಸರ್ಕಾರ ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕು. ಸರ್ಕಾರ ಈ ಕೂಡಲೇ 1300 ಕೋಟಿ ರೂ. ಆರ್.ಟಿ.ಇ. ಬಾಕಿ ಬಿಡುಗಡೆ ಮಾಡಬೇಕು. ಉತ್ತಮ ಗುಣಮಟ್ಟದ ಶಿಕ್ಷಣ ನೀಡಲು ಶ್ರಮಿಸುತ್ತಿರುವ ಶಿಕ್ಷಕರಿಗೆ ಉತ್ತೇಜನ ನೀಡಬೇಕು.@CMofKarnataka @BSYBJP pic.twitter.com/avrLjTWcR4
— H D Devegowda (@H_D_Devegowda) May 11, 2020
ಅಸಂಘಟಿತ ವಲಯಕ್ಕೆ ಪ್ಯಾಕೇಜ್ ಘೋಷಣೆ ಮಾಡಿದಂತೆ ಖಾಸಗಿ ಶಾಲಾ ಶಿಕ್ಷಕರಿಗೂ ಕೂಡ ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕು. ಖಾಸಗಿ ಅನುದಾನರಹಿತ ಶಿಕ್ಷಣ ಸಂಸ್ಥೆಗಳ ಮೇಲಿನ ಆರ್ಥಿಕ ಹೊರೆಯನ್ನು ಕಡಿಮೆ ಮಾಡಿದರೆ ಗುಣಮಟ್ಟದ ಶಿಕ್ಷಣ ನೀಡಲು ಸಾಧ್ಯ. ಕೂಡಲೇ ಶಿಕ್ಷಣ ಸಚಿವರು, ಶಿಕ್ಷಣ ಇಲಾಖೆಯ ಅಧಿಕಾರಿಗಳ ಸಭೆ ಕರೆದು ಸಮಾಲೋಚನೆ ನಡೆಸಿ ಶಿಕ್ಷಕರ ಹಿತ ಕಾಯಬೇಕೆಂದು ಒತ್ತಾಯಿಸಿದ್ದಾರೆ.



