ಡಿವಿಜಿ ಸುದ್ದಿ, ಹೊಸಪೇಟೆ: ರಾಜ್ಯದ ಕೆಲವೆಡೆ ಈಗಾಗಲೇ ರಾತ್ರಿ ಬಸ್ ಸಂಚಾರ ಆರಂಭಗೊಂಡಿದೆ. ಅತಿ ಶೀಘ್ರದಲ್ಲಿಯೇ ರಾಜ್ಯದಾದ್ಯಂತ ರಾತ್ರಿ ವೇಳೆ ಬಸ್ ಸಂಚಾರ ವಿಸ್ತರಿಸಲಾಗುವುದು ಎಂದು ಉಪಮುಖ್ಯಮಂತ್ರಿ, ಸಾರಿಗೆ ಸಚಿವಲಕ್ಷ್ಮಣ್ ಸವದಿ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೇ 30ರಂದು ಕೇಂದ್ರದ ಹೊಸ ಮಾರ್ಗಸೂಚಿ ಬರಲಿದೆ. ಅದನ್ನು ನೋಡಿಕೊಂಡು ರಾತ್ರಿ ಬಸ್ ಸಂಚಾರಕ್ಕೆ ಯಾವ ರೀತಿಯ ವ್ಯವಸ್ಥೆ ಮಾಡಬೇಕು ಎನ್ನುವುದರ ಬಗ್ಗೆ ತೀರ್ಮಾನಕ್ಕೆ ಬರಲಾಗುವುದು ಎಂದರು.
ಕೆಲ ತಾಂತ್ರಿಕ ತೊಂದರೆಗಳಿಂದ ಆಟೊ ಚಾಲಕರಿಗೆ ಸರ್ಕಾರ ಘೋಷಿಸಿರುವ ಪರಿಹಾರ ನಿಂತಿತ್ತು. ಇದೀಗ ಸಮಸ್ಯೆ ಬಗೆಹರಿದಿದೆ. ಎಲ್ಲ ಆಟೊ ಚಾಲಕರಿಗೆ ನೇರವಾಗಿ ಅವರ ಖಾತೆಗೆ ಹಣ ಜಮೆ ಮಾಡಲಾಗುವುದು ಎಂದು ತಿಳಿಸಿದರು.



