ಡಿವಿಜಿ ಸುದ್ದಿ, ಬೆಂಗಳೂರು: ಲಾಕ್ ಡೌನ್ ವಿಸ್ತರಣೆ ಹಿನ್ನೆಲೆ ಏಪ್ರಿಲ್ 15ರಿಂದ ಮದ್ಯ ಮಾರಾಟಕ್ಕೆ ಅವಕಾಶ ಸಿಗಲಿದೆ ಎಂಬ ನಿರೀಕ್ಷೆಯಲ್ಲಿದ್ದ ಮದ್ಯ ಪ್ರಿಯರಿಗೆ ಸರ್ಕಾರ ಬಿಕ್ ಶಾಕ್ ನೀಡಿದೆ. ಮೇ 3ರವರೆ ಮದ್ಯ, ತಂಬಾಕು ಉತ್ಪನ್ನ, ಗುಟ್ಕಾ, ಬಿಡಿ, ಸಿಗರೇಟ್ ಬ್ಯಾನ್ ಮಾಡಿ ಆದೇಶ ಹೊರಡಿಸಿದೆ.

ದೇಶದಲ್ಲಿ ಎರಡನೇ ಹಂತದ ಲಾಕ್‌ಡೌನ್ ವಿಸ್ತರಣೆಯಾಗಿದ್ದು ಮೇ 3ರವರೆಗೂ ಭಾರತ ಸಂಪೂರ್ಣ ಸ್ತಬ್ದವಾಗಲಿದೆ. ಬುಧವಾರ ಕೇಂದ್ರ ಸರ್ಕಾರ ಮಾರ್ಗಸೂಚಿಯನ್ನು ಹೊರಡಿಸಿದ್ದು ಮದ್ಯ ಮಾರಾಟವನ್ನು ನಿಷೇಧಿಸಿದೆ.ಎಲ್ಲಾ ರೀತಿಯ ಮದ್ಯ ಮಾರಾಟಕ್ಕೆ ನಿಷೇಧ ಹಾಕಿರುವ ಕೇಂದ್ರ ಸರ್ಕಾರ ಬಾರ್, ಕ್ಲಬ್, ಪಬ್‌ಗಳನ್ನು ಕೂಡ ಮೇ 3ರವರೆಗೂ ತೆರೆಯುವಂತಿಲ್ಲ ಎಂದು ಮಾರ್ಗಸೂಚಿಯಲ್ಲಿ ಸೂಚಿಸಿದೆ.

ಕೇಂದ್ರದ ಮಾರ್ಗಸೂಚಿಗಳು ಬಂದ ಮೇಲೆ ಮದ್ಯ ಮಾರಾಟಕ್ಕೆ ಅವಕಾಶ ನೀಡುವ ಬಗ್ಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸುಳಿವು ನೀಡಿದ್ದರು. ಇದೀಗ ಕೇಂದ್ರ ಸರ್ಕಾರವೇ ಮಾರ್ಗಸೂಚಿಯಲ್ಲಿ ನಿಷೇಧ ಹೇರಿರುವುದರಿಂದ ರಾಜ್ಯ ಸರ್ಕಾರ ನಿಯಮ ಪಾಲನೆ ಮಾಡಬೇಕಾಗಿದೆ.



